ಹನೂರು : ತಾಲೂಕಿನ ಅಜ್ಜೀಪುರ ಸಮೀಪದ ಕೆ.ಗುಂಡಾಪುರ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಈ ಸಂಬಂಧ ಶನಿವಾರ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗ್ರಾಮದ ಚಂದ್ರು ಎಂಬುವರ ಪತ್ನಿ ಮಂಜುಬಾಯಿ (38) ನಾಪತ್ತೆಯಾದವರು. ಇವರು ನ.14 ರಂದು ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಗೆ ತಿಳಿಸಿದ್ದರು. ಆದರೆ 2 ದಿನಗಳ ಕಳೆದರೂ ಮನೆಗೆ ವಾಪಾಸ್ಸಾಗಿಲ್ಲ. ಈ ಬಗ್ಗೆ ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಆದ್ದರಿಂದ ಪತ್ನಿಯನ್ನು ಹುಡುಕಿ ಕೊಡುವಂತೆ ಪತಿ ಚಂದ್ರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಈಕೆ ಮನೆಯಿಂದ ಹೊರಡುವಾಗ ಬಿಳಿ ಬಣ್ಣದ ಸೀರೆ ಧರಿಸಿದ್ದು, ಸಾಧಾರಣ ಮೈಕಟ್ಟು, ಗುಂಡು ಮುಖವನ್ನು ಹೊಂದಿದ್ದಾರೆ. ಕನ್ನಡ ಹಾಗೂ ಲಂಬಾಣಿ ಭಾಷೆಯನ್ನು ಮಾತನಾಡುತ್ತಾರೆ. ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ರಾಮಾಪುರ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.