ಜಿಲ್ಲೆ

ಮಸ್ಕಿ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿ

ಮಸ್ಕಿ: ಮಸ್ಕಿ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡುವಂತೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ ಸಿಂಗ್‌ಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಡಾ.ಅಜಯ ಸಿಂಗ್ ಕಚೇರಿಯಲ್ಲಿ ಗುರುವಾರ ಭೇಟಿ ಮಾಡಿದರು. ಮಸ್ಕಿ ಕ್ಷೇತ್ರ ತಾಲೂಕು ಕೇಂದ್ರವಾಗಿದ್ದು, ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳನ್ನು ಆರಂಭಿಸಿ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಬೇಕಾಗಿದೆ. ಅದಕ್ಕಾಗಿ ವಿಶೇಷ ಅನುದಾನ ಒದಗಿಸುವಂತೆ ಕೋರಿದರು. ಹೆಚ್ಚಿನ ಅನುದಾನ ನೀಡಿದರೆ ಶಾಲೆ-ಕಾಲೇಜುಗಳಲ್ಲಿ ಮೂಲ ಸೌಕರ್ಯ ಒದಗಿಸಲು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ತುರ್ವಿಹಾಳ ವಿವರಿಸಿದರು.