ಆರ್.ಬಸನಗೌಡ ತುರ್ವಿಹಾಳ ಶಾಸಕ ಮಸ್ಕಿ. 
ಜಿಲ್ಲೆ

ಮಸ್ಕಿಯಲ್ಲಿ ಇಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Kopala - Desk - Eraveni

ಮಸ್ಕಿ: 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು, ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ ಕಾಂಗ್ರೇಸ್ ಸರ್ಕಾರ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ತಿಳಿಸಿದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ.

ಆ.30 ಬುಧವಾರ ಮಧ್ಯಾಹ್ನ 12 ಗಂಟೆಗೆ ಮೈಸೂರಿನಲ್ಲಿ ಮುಖ್ಯಮಂತ್ರಿ, ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಲವರು ಸಚಿವರು ಉದ್ಘಾಟನೆ ಮಾಡಲಿದ್ದು, ಈ ಕಾರ್ಯಕ್ರಮದ ನೇರ ಪ್ರಸಾರವನ್ನು ವಿಕ್ಷೀಸಲು ಮಸ್ಕಿಯ ಶ್ರೀ ಭ್ರಮರಾಂಭದೇವಿ ಕಲ್ಯಾಣ ಮಂಟಪದಲ್ಲಿ ಎಲ್‌ಇಡಿ ಅಳವಡಿಸಿ ಅವಕಾಶ ಕಲ್ಪಿಸಲಾಗಿದೆ.

ಅಲ್ಲದೇ ಏಕಕಾಲಕ್ಕೆ ವಿಕ್ಷೀಸಲು ಟಿ.ವಿ, ಎಲ್.ಇ.ಡಿ ಪರದೆಯ ಮೇಲೆ ವಿಕ್ಷೀಸಲು ಗ್ರಾಮ ಪಂಚಾಯತ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಆದ್ದರಿಂದ ಕಾರ್ಯಕ್ರಮಕ್ಕೆ ಸಾರ್ವಜನಿಕರು ಫಲಾನುಭವಿಗಳು ಆಗಮಿಸಿ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಮನವಿ ಮಾಡಿದ್ದಾರೆ.