ಜಿಲ್ಲೆ

ಕಾರ್ನಾಡಲ್ಲಿ ಸಾಮೂಹಿಕ ಆಶ್ಲೇಷಾ ಬಲಿ

Avinash R

ಮೂಲ್ಕಿ: ಕಾರ್ನಾಡು ಶ್ರೀ ಹರಿಹರ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷಾ ಬಲಿಸೇವೆಯು ಮಂಗಳವಾರ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ಅರ್ಚಕ ಹಯಗ್ರೀವ ಪಡ್ಡಿಲ್ಲಾಯರ ಪ್ರಧಾನ ಪೌರೋಹಿತ್ಯದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸಾಮೂಹಿಕ ಆಶ್ಲೇಷಾ ಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು.

ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ಎಚ್.ಅರವಿಂದ ಪೂಂಜ ಮತ್ತು ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.