ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು. ಸಮಿತಿ ಮುಖಂಡ ನಲ್ಲಪ್ಪನಹಳ್ಳಿ ನಂಜಪ್ಪ, ಕಾರಹಳ್ಳಿ ಶ್ರೀನಿವಾಸ್ ಇತರರು ಇದ್ದರು. 
ಜಿಲ್ಲೆ

30 ರಂದು ಬೃಹತ್ ಸಮಾವೇಶ

ಬೆಂಗಳೂರು ಗ್ರಾಮಾಂತರ ಡೆಸ್ಕ್

1000 ದಿನ ತಲುಪಿದ ಭೂಸ್ವಾಧೀನ ವಿರೋಧಿ ಹೋರಾಟ

ದೇವನಹಳ್ಳಿ : ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 1000 ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಡಿ.30ರಂದು ದೇವನಹಳ್ಳಿಯ ಹಳೇ ಬಸ್ ನಿಲ್ದಾಣದಲ್ಲಿ ಬೃಹತ್ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟ ಸಮಿತಿ ಪ್ರಧಾನ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರೈತರ ಹಿತಕಾಯುವುದಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟದ ಸ್ಥಳದಿಂದ ಡಿಸಿ ಕಚೇರಿವರೆಗೆ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾವನ್ನು ತಾತ್ಕಾಲಿಕವಾಗಿ ಮುಂದೂಡಿ ಡಿ.30ರಂದು ರೈತರ ಬೃಹತ್ ಸಮಾವೇಶ ನಡೆಸಲಾಗುತ್ತಿದೆ ಎಂದು ಹೋರಾಟ ಸಮಿತಿಯ ನಲ್ಲಪ್ಪನಹಳ್ಳಿ ನಂಜಪ್ಪ ತಿಳಿಸಿದರು. ಸಮಿತಿ ಮುಖಂಡ ನಲ್ಲಪ್ಪನಹಳ್ಳಿ ನಂಜಪ್ಪ, ಕಾರಹಳ್ಳಿ ಶ್ರೀನಿವಾಸ್, ರೈತ ಮುಖಂಡರಾದ ರೈತ ಮುಖಂಡರಾದ ತಿಮ್ಮರಾಯಪ್ಪ, ಬಿದಲೂರು ರಮೇಶ್, ಸೊಣ್ಣೇಗೌಡ, ಮಾರೇಗೌಡ, ಹನುಮಂತರಾಯಪ್ಪ, ಅಶ್ವಥಪ್ಪ, ಮುಕುಂದ, ತಿಮ್ಮರಾಯಪ್ಪ, ಮೋಹನ್, ಪ್ರವೀಣ್, ನಂದನ್, ವಿನೋದ್, ಗೋಪಿನಾಥ್, ಕೃಷ್ಣಪ್ಪ, ನಂಜೇಗೌಡ, ಮುನೇಗೌಡ, ವೆಂಕಟರಮಣಪ್ಪ ಸೇರಿ 13 ಹಳ್ಳಿಗಳ ರೈತರು ಭಾಗಿಯಾಗಿದ್ದರು.