ದೊಡ್ಡಬಳ್ಳಾಪುರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಕಾರ್ಯಕ್ರಮದ ಕರಪತ್ರ ಬಿಡುಗಡೆ ಮಾಡಲಾಯಿತು. ಯುವ ಟಕ ಜಿಲ್ಲಾಧ್ಯಕ್ಷ ಲೋಕೇಶ್​ ನಾಗಸಂದ್ರ, ಜಿಲ್ಲಾ ನಿರ್ದೇಶಕರಾದ ಪ್ರಭಾಕರ್​, ತಾಲೂಕು ಅಧ್ಯಕ್ಷ ಸುಜಯ್​ ಕುಮಾರ್​, ಖಜಾಂಚಿ ವೀರಣ್ಣ ಇದ್ದರು. 
ಜಿಲ್ಲೆ

25ಕ್ಕೆ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ

ಬೆಂಗಳೂರು ಗ್ರಾಮಾಂತರ ಡೆಸ್ಕ್

ದೊಡ್ಡಬಳ್ಳಾಪುರ : ನಗರದ ಬಸವ ಭವನದಲ್ಲಿ ಮೇ 25ರಂದು ಇಷ್ಟಲಿಂಗ ಮಹಾಪೂಜೆ ಹಾಗೂ ಭಾವೈಕ್ಯ ಧರ್ಮಸಮಾರಂಭವನ್ನು

ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಯುವ ಟಕದ ಅಧ್ಯಕ್ಷ ಲೋಕೇಶ್​ ನಾಗಸಂದ್ರ ತಿಳಿಸಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ತಾಲೂಕು ವೀರಶೈವ ಲಿಂಗಾಯತ ಸಮಾಜ (ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ) ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 7 ಗಂಟೆಗೆ ಗುರುವರ್ಯರಿಂದ ಶಿವದೀೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಬೆಳಗ್ಗೆ 8 ಗಂಟೆಗೆ ಪೂರ್ಣ ಕುಂಭ ಸಹಿತ ಮಂಗಳವಾದ್ಯಗಳೊಂದಿಗೆ ನಗರದ ಸೋಮೇಶ್ವರ ದೇವಾಲಯದಿಂದ ಪಾದಯಾತ್ರೆ ಮೂಲಕ ರಂಭಾಪುರಿ ಶ್ರೀಗಳು ಬಸವ ಭವನಕ್ಕೆ ಆಗಮಿಸಲಿದ್ದಾರೆ, ಬೆಳಗ್ಗೆ 9 ಗಂಟೆಗೆ ಇಷ್ಟಲಿಂಗ ಮಹಾಪೂಜೆ ಪ್ರಾರಂಭವಾಗಲಿದೆ ಎಂದರು.

ತಾಲೂಕು ಅಧ್ಯಕ್ಷ ಸುಜಯ್​ ಕುಮಾರ್​ ಮಾತನಾಡಿ, ತಾಲೂಕಿನಲ್ಲಿ ಸಾಮೂಹಿಕ ಶಿವದೀೆ, ಇಷ್ಟಲಿಂಗ ಮಹಾಪೂಜೆ ಜತೆಗೆ ಭಾವೈಕ್ಯ ಧರ್ಮ ಸಮಾರಂಭ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬಾಳೆಹೊನ್ನೂರು ಶಾಖಾ ಮಠ ಎಡೆಯೂರಿನ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವು ಪ್ರಮುಖರು ಭಾಗವಹಿಸಲಿದ್ದಾರೆ. ಅರಣ್ಯ ಸಚಿವ ಬಿ.ಈಶ್ವರಖಂಡ್ರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಡಾ.ಕೆ.ಸುಧಾಕರ್​, ಆಹಾರ ಸಚಿವ ಕೆ.ಎಚ್​.ಮುನಿಯಪ್ಪ, ಶಾಸಕ ಧೀರಜ್​ ಮುನಿರಾಜು ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.