ಗುಂಡ್ಲುಪೇಟೆ: ಬಕ್ರಿದ್ ಹಬ್ಬದ ಅಂಗವಾಗಿ ಮುಸ್ಲಿಮರು ಶನಿವಾರ ಪಟ್ಟಣದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬೆಳಗ್ಗೆ 10 ಗಂಟೆಗೆ ಈದ್ಗಾ ಮೈದಾನದಲ್ಲಿ ಸಮಾವೇಶಗೊಂಡ ಶ್ವೇತ ವಸ್ತ್ರಧರಿಸಿದ ಮಕ್ಕಳು, ಯುವಕರು ಹಾಗೂ ಹಿರಿಯರು ಪರಸ್ಪರ ಅಪ್ಪಿಕೊಂಡು ಶುಭಾಶಯ ಕೋರಿದರು. ನಂತರ ಸಾಮೂಹಿಕ ಪ್ರಾರ್ಥನೆ ನಡೆಸಿ ಅನಾಥರು ಹಾಗೂ ಬಡವರಿಗೆ ಆಹಾರ ಮತ್ತು ವಸ್ತ್ರಗಳನ್ನು ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡರು, ಜಾಮೀಯಾ ಮಸೀದಿ ಪದಾಧಿಕಾರಿಗಳು ಹಾಗೂ ಮುಖಂಡರು ಹಾಜರಿದ್ದರು.