ಜಿಲ್ಲೆ

ಸುಬ್ರಹ್ಮಣ್ಯದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Avinash R

ಸುಬ್ರಹ್ಮಣ್ಯ: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಪಂ ಮಂಗಳೂರು ಆದೇಶದಂತೆ ಸುಬ್ರಹ್ಮಣ್ಯ ಗ್ರಾಪಂ ವತಿಯಿಂದ ಬೃಹತ್ ಸ್ವಚ್ಛತಾ ಅಭಿಯಾನ ನಡೆಯಿತು.

ಸುಬ್ರಹ್ಮಣ್ಯ ಪೇಟೆಯ ಪರಿಸರ, ದೇವಳದ ವಠಾರ, ಮುಖ್ಯ ರಸ್ತೆಯ ಬದಿಗಳಲ್ಲಿ, ಕುಮಾರಧಾರಾ ನದಿ ಸ್ನಾನಘಟ್ಟ ಸುತ್ತಮುತ್ತಲಿನ ಪ್ರದೇಶ, ಕುಮಾರಧಾರಾದಿಂದ ಪರ್ವತಮುಖಿ ಪ್ರಾಥಮಿಕ ಆರೋಗ್ಯ ಕೇಂದ್ರದ ತನಕ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಇಂಜಾಡಿಯಿಂದ ಮಲಯಾಳ ತನಕ ಮುಖ್ಯರಸ್ತೆ ಬದಿಗಳಲ್ಲಿ ನೂರಾರು ಮಂದಿಯಿಂದ ಸ್ವಚ್ಛತಾ ಸೇವೆ ನಡೆಯಿತು.

ಸುಬ್ರಹ್ಮಣ್ಯ ಗ್ರಾಪಂ ಎದುರಿನಿಂದ ಆರಂಭವಾದ ಸ್ವಚ್ಛತಾ ಆಂದೋಲನ ಕಡಬ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಉದ್ಘಾಟಿಸಿದರು. ಕಡಬ ತಾಪಂ ಸಹಾಯಕ ನಿರ್ದೇಶಕ ಚನ್ನಪ್ಪ ಗೌಡ ಕಜೆಮೂಲೆ, ಕಡಬ ತಾಲೂಕು ಕಚೇರಿ ವ್ಯವಸ್ಥಾಪಕ ಭುವನೇಂದ್ರ, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ, ಸುಬ್ರಹ್ಮಣ್ಯ ಪಿಡಿಒ ಮಹೇಶ್, ಕಾರ್ಯದರ್ಶಿ ಮೋನಪ್ಪ ಡಿ., ಸೀನಿಯರ್ ಚೇಂಬರ್ ಅಧ್ಯಕ್ಷ ಡಾ.ರವಿ ಕಕ್ಕೆಪದವು, ಸ್ಥಾಪಕಾಧ್ಯಕ್ಷ ವಿಶ್ವನಾಥ ನಡುತೋಟ ಉಪಸ್ಥಿತರಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿ, ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.