ಕೋಲಾರ: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ, ಏ.17ರಂದು ರಾಜ್ಯಾದ್ಯಂತ ಕಾಂಗ್ರೆಸ್ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ನಾರಾಯಣಸ್ವಾಮಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರವು ತೈಲ, ವಿದೇಶಿ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ರಾಜ್ಯದ ಬಿಜೆಪಿ ಮುಖಂಡರು ಅದನ್ನು ಸಮರ್ಥಿಸಿಕೊಳ್ಳಲು ನಮ್ಮ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ ಎಂದರು.
ರಾಜ್ಯ ಸರ್ಕಾರವು ಪ್ರತಿ ಲೀಟರ್ ಹಾಲಿನ ಮೇಲೆ 4 ರೂ. ನೀರಿಗೆ 1 ಪೈಸೆ ಹಾಗೂ ವಿದ್ಯುತ್ ಆಧುನಿಕ ಮೀಟರ್ ಅಳವಡಿಕೆ ಸಂಬಂಧ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿಯು ಜನಾಕ್ರೋಶ ಯಾತ್ರೆ ಆರಂಭಿಸಿದೆ. ಅದೇ ದಿನವೇ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಯನ್ನು ಕೇಂದ್ರ ಸರ್ಕಾರವು ಏರಿಕೆ ಮಾಡುವ ಮೂಲಕ ಮಮಾರ್ಘಾತ ನೀಡಿದೆ ಎಂದು ತಿರುಗೇಟು ನೀಡಿದರು.
ಕಚ್ಚಾ ತೈಲ ಬೆಲೆ ಬ್ಯಾರಲ್ಗೆ 65 ಡಾಲರ್ ಇದ್ದರೂ ಬೆಲೆ ಇಳಿಕೆ ಮಾಡುತ್ತಿಲ್ಲ. ಈ ಎಲ್ಲದರಿಂದಾಗಿ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಇದನ್ನೆಲ್ಲ ಮನಗಂಡು ರಾಜ್ಯ ಕಾಂಗ್ರೆಸ್ ಸರ್ಕಾರವು 57 ಸಾವಿರ ಕೋಟಿ ರೂ. ಮೀಸಲಿರಿಸಿ 5 ಗ್ಯಾರಂಟಿ ನೀಡುತ್ತಿದೆ. ಬಿಜೆಪಿಯವರು ಇದೀಗ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಲ್ಲದೆ, ರಾಜ್ಯದ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕೇಂದ್ರದ ಬೆಲೆ ಏರಿಕೆ ವಿರುದ್ಧ ಬಿಜೆಪಿಯವರು ಯಾರೂ ಮಾತನಾಡುತ್ತಿಲ್ಲ. ಹೀಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿ ತಾಲೂಕಿಗೆ 10 ಬಸ್ ಮಾಡಲಾಗಿದ್ದು, ಪ್ರತಿ ತಾಲೂಕಿನಿಂದಲೂ ಕನಿಷ್ಠ 500 ಮಂದಿ ಭಾಗವಹಿಸಲು ತೀಮಾರ್ನಿಸಲಾಗಿದೆ. ಈ ಸಂಬಂಧ ಜಿಲ್ಲಾಧ್ಯಕ್ಷರು, ಶಾಸಕರು, ಎಂಎಲ್ಸಿಗಳು, ಪದಾಧಿಕಾರಿಗಳು ಸೇರಿ ತೀರ್ಮಾನಕೈಗೊಳ್ಳಲು ಸಲಹೆ ನೀಡಲಾಗಿದೆ ಎಂದರು.
ಅಚ್ಛೇದಿನ್ ಬರಲಿದೆ, ನಾವು ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ಕಪ್ಪು ಹಣ ವಾಪಸ್ ತಂದು 15 ಲಕ್ಷರೂ ಪ್ರತಿ ಖಾತೆಗೆ ಹಾಕುತ್ತೇವೆ ಎಂದವರು ಯಾರು..?, 3ನೇ ಅವಧಿಗೆ ಅಧಿಕಾರಕ್ಕೆ ಬಂದರೂ ಅದರ ಬಗ್ಗೆ ಚಕಾರವಿಲ್ಲ ಎಂದು ಆರೋಪಿಸಿದರು.
ರೈತರ ಸಾಲಮನ್ನಾ ಮಾಡದ ಕೇಂದ್ರ ಸರ್ಕಾರವು ಕಾರ್ಪೊರೇಟ್ ಕಂಪನಿ ಮಾಲೀಕರ ಕೋಟ್ಯಾಂತರ ರೂಪಾಯಿ ಮನ್ನಾ ಮಾಡಿದ್ದಾರೆ. ನಾವು ಸುಳ್ಳು ಹೇಳಿಕೊಂಡು ಪ್ರತಿಭಟನೆ ಮಾಡುತ್ತಿಲ್ಲ ವಾಸ್ತವಾಂಶ ತಿಳಿಸಲು ಪಣ ತೊಟ್ಟಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷಿ$್ಮನಾರಾಯಣ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಕೆಪಿಸಿಸಿ ಒಬಿಸಿ ಟಕದ ಉಪಾಧ್ಯಕ್ಷ ಮಂಜುನಾಥ್, ಎಸ್ಸಿ ಘಟಕದ ಕೆ.ಜಯದೇವ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ನಾಗರಾಜ್, ಮಹಿಳಾ ಟಕದ ಜಿಲ್ಲಾಧ್ಯಕ್ಷೆ ರತ್ನಮ್ಮ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಮುಖಂಡ ಶ್ರೀಧರ್ ಉಪಸ್ಥಿತರಿದ್ದರು.