ಜಿಲ್ಲೆ

ಡಾ.ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ 17ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಮೈಸೂರು: ಡಾ.ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ ಡಿ.17ರಂದು ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ತಿಳಿಸಿದರು.

ವಿಷ್ಣುವರ್ಧನ್ ಅವರ ಪುಣ್ಯಭೂಮಿ ಮತ್ತು ಸ್ಮಾರಕಕ್ಕೆ ಸಂಬಂಧಿಸಿದಂತೆ ಹಲವಾರು ವರ್ಷಗಳಿಂದ ಹೋರಾಟ ನಡೆದಿದೆ. ಆದರೆ ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಕೊರತೆ ಕಾಡುತ್ತಿದೆ. ಆದ್ದರಿಂದ ಅವರ ಸಮಾಧಿ ಸ್ಥಳವನ್ನು ಅಭಿಮಾನ್ ಸ್ಟುಡಿಯೋದಲ್ಲಿಯೇ ನಿರ್ಮಿಸಬೇಕೆಂದು ಒತ್ತಾಯಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ನಿಟ್ಟಿನಲ್ಲಿ ಡಿ.15ರ ಸಂಜೆ 5.30ಕ್ಕೆ ನಗರದ ಚಾಮುಂಡಿಪುರಂ ಹತ್ತಿರದ ಅಪೂರ್ವ ಹೋಟೆಲ್‌ನಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದರು.
ಮುಖಂಡರಾದ ಪರಮೇಶ್ವರ್, ಮದನ್‌ಕುಮಾರ್, ಸಂತೋಷ್, ಕುಮಾರ್, ಸಿದ್ದಪ್ಪ, ಕೇಬಲ್ ಮಹೇಂದ್ರ, ದೀಪು ಇದ್ದರು.