ಮಂಗಳೂರು: ಕೇರಳದ ತಿರುವನಂತಪುರದಲ್ಲಿ ಭಾನುವಾರ ಮುಕ್ತಾಯಗೊಂಡ 4ನೇ ರಾಷ್ಟ್ರೀಯ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಸಂತ ಆ್ಯಗ್ನೆಸ್ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕಿ ವಸುಧಾ ಅವರು ಹ್ಯಾಮರ್ ಎಸೆತ ಮತ್ತು ಗುಂಡು ಎಸೆತದಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಇದೇ ಸ್ಪರ್ಧೆಯ ಚಕ್ರ ಎಸೆತದಲ್ಲಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಆ ಮೂಲಕ ಮೂರೂ ವಿಭಾಗದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ತೇರ್ಗಡೆ ಪಡೆದುಕೊಂಡಿದ್ದಾರೆ.