ಬೆಂಗಳೂರು: ಡ್ರಗ್ಸ್ ವ್ಯವಹಾರ ಸಂಬಂಧ ಬಿಗ್ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ಗೋವಿಂದಪುರ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ. ನೈಜೀರಿಯನ್ ಡ್ರಗ್ ಫೆಡ್ಲರ್ಸ್ ಜತೆ ಮಸ್ತಾನ್ ಸಂಪರ್ಕ ಹೊಂದಿರುವ ಆರೋಪ ಕೇಳಿಬಂದಿದೆ.
ಡ್ರಗ್ಸ್ ಪ್ರಕರಣದಲ್ಲಿ ನೈಜಿರಿಯನ್ ಡ್ರಗ್ಸ್ ಪೆಡ್ಲರ್ ಬಂಧನವಾಗಿತ್ತು. ಈ ವೇಳೆ ನೀಡಿದ ಮಾಹಿತಿ ಆಧಾರದ ಮೇಲೆ ಕೋರ್ಟ್ನಿಂದ ಸರ್ಚ್ ವಾರೆಂಟ್ ಪಡೆದು ದಾಳಿ ಮಾಡಲಾಗಿದೆ. ಈ ವೇಳೆ ಮನೆಯಲ್ಲಿಯೇ ಇದ್ದ ಮಸ್ತಾನ್ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಸ್ತಾನ್ ಸ್ನೇಹಿತ ಕೇಶವ್ ಮನೆ ಮೇಲೂ ಸಹ ಗೋವಿಂದಪುರ ಠಾಣಾ ಪೊಲೀಸರು ದಾಳಿ ಮಾಡಿದ್ದಾರೆ. ಸದ್ಯ ಮನೆಯನ್ನು ಪರಿಶೀಲಿಸುತ್ತಿರುವ ಪೊಲೀಸರು ಸಾಕ್ಷ್ಯಾಧಾರ ಹುಡುಕಾಟದಲ್ಲಿ ತೊಡಗಿದ್ದಾರೆ.
ಅಂದಹಾಗೆ ಮಸ್ತಾನ ಬಿಗ್ಬಾಸ್ 4ನೇ ಆವೃತ್ತಿಯಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದುಕೊಂಡಿದ್ದರು. ಕೇವಲ ಒಂದೇ ವಾರಕ್ಕೆ ಮನೆಯಿಂದ ಹೊರಬಂದರು. (ಏಜೆನ್ಸೀಸ್)