ಮಲ್ಲೋಹಳ್ಳಿ ಸರ್ಕಾರಿ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗಣಿತಾ ಕಲಿಕಾ ಆಂದೋಲನಾ ಸ್ಪರ್ಧೆಯಲ್ಲಿ ಮಕ್ಕಳಿಗೆ ಪ್ರಶಂಸನಾ ಪತ್ರಗಳನ್ನು ವಿತರಿಸಲಾಯಿತು. ಗ್ರಾಪಂ ಸದಸ್ಯ ಮಂಜುನಾಥ್, ಚೇತನಾ ರಾಜೇಶ್, ಗ್ರಾಪಂ ಕಾರ್ಯದರ್ಶಿ ಚಂದ್ರಶೇಖರ್, ನವೀನ್‌ಕುಮಾರ್ ಸಿಆರ್‌ಪಿ ಕುಮಾರ್ ಮತ್ತಿತರರಿದ್ದರು. 
ಜಿಲ್ಲೆ

ಮಕ್ಕಳಿಗೆ ಗಣಿತ ಕಲಿಕಾ ಸ್ಪರ್ಧೆ

ವಿಜಯವಾಣಿ ಸುದ್ದಿಜಾಲ ಮಧುರೆ
ಸರ್ಕಾರಿ ಶಾಲೆ ಮಕ್ಕಳಲ್ಲಿ ಗಣಿತ ವಿಷಯ ಕಲಿಕೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಮಲ್ಲೋಹಳ್ಳಿ ಶಾಲೆ ಮುಖ್ಯಶಿಕ್ಷಕ ವಿಜಯ್ ಕುಮಾರ್ ಹೇಳಿದರು.
ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೋಹಳ್ಳಿ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಗಣಿತಾ ಕಲಿಕಾ ಆಂದೋಲನಾ ಸ್ಪರ್ಧಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾನ್ಯವಾಗಿ ಸರ್ಕಾರಿ ಶಾಲೆಯ ಮಕ್ಕಳು ಎಲ್ಲ ವಿಷಯಗಳಲ್ಲೂ ಮುಂದೆ ಇದ್ದರೂ ಗಣಿತದ ವಿಷಯದಲ್ಲಿ ಸ್ವಲ್ಪ ಮಟ್ಟದಲ್ಲಿ ಹಿಂದುಳಿಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಈ ವಿಷಯದ ಬಗ್ಗೆ ಸುಧಾರಣೆ ತರುವ ಪ್ರಯತ್ನವಾಗಿ ಈ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲ ವಿಷಯಗಳಲ್ಲೂ ಮಕ್ಕಳು ಪರಿಣಿತಿ ಹೊಂದಿರಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿ ದಿಸೆಯಲ್ಲಿ ಶಿಕ್ಷಣದ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ವಿಜೇತರಿಗೆ ನಗದು ಬಹುಮಾನ: ಕೋಡಿಹಳ್ಳಿ ಕ್ಲಸ್ಟರ್‌ನ 9 ಶಾಲೆಯ 67 ಮಕ್ಕಳು ಭಾಗವಹಿಸಿದ್ದರು. 4ನೇ ತರಗತಿ, 5ನೇ ತರಗತಿ ಹಾಗೂ 6ನೇ ತರಗತಿ ಮಕ್ಕಳಿಗೆ ಪ್ರತ್ಯೇಕವಾಗಿ ಗಣಿತ ಕಲಿಕಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ನಗದು ರೂಪದಲ್ಲಿ ಬಹುಮಾನ ವಿತರಿಸಲಾಯಿತು. ಪ್ರಥಮ ಬಹುಮಾನ 1 ಸಾವಿರ ರೂ. ದ್ವಿತೀಯ 600 ರೂ. ತೃತೀಯ ಬಹುಮಾನ 400 ರೂಪಾಯಿಯನ್ನು ತರಗತಿವಾರು ವಿತರಿಸಲಾಯಿತು.