ಜಿಲ್ಲೆ

ಮಟ್ಕಾನಿರತ ಇಬ್ಬರ ಬಂಧನ

ಸೌಮ್ಯ ಆರ್

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ಬಿ.ಸಿ.ರೋಡ್ ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ. ಬಂಟ್ವಾಳ ಮೂಡ ಗ್ರಾಮದ ಕೈಕಂಬದಲ್ಲಿ ಖಾಸಗಿ ಕಟ್ಟಡವೊಂದರ ಬಳಿ ಆಟಕ್ಕೆ ತಯಾರಿ ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಪ್ರಮುಖ ಆರೋಪಿಗಳಾದ ನಾವೂರ ನಿವಾಸಿ ಸುರೇಶ್ ಹಾಗೂ ಮಿತ್ತಬೈಲು ನಿವಾಸಿ ಭಾಸ್ಕರ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ 3,500 ರೂ. ನಗದು ಹಾಗೂ ಆಟಕ್ಕೆ ಬಳಸಿದ ಮಟ್ಕಾ ಎಲೆ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.