ವಿಜಯಪುರ : ಹಾರೋಹಳ್ಳಿ ಗ್ರಾಮ ಪಂಚಾಯಿತಿಯು ವಿವಿಧ ಜನಪರ, ಅಭಿವೃದ್ಧಿ ಪರ ಕೆಲಸ ಕಾರ್ಯಗಳನ್ನು ಕೈಗೊಂಡು ಜಿಲ್ಲೆಗೆ ಮಾದರಿ ಪಂಚಾಯಿತಿ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ದೇವನಹಳ್ಳಿ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನಿಮಾರ್ಣಗೊಂಡ ನೂತನ ಗ್ರಾಪಂ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳು ಮಾದರಿ ಕಟ್ಟಡ ಹೊಂದುವ ಜತೆಗೆ ಸರ್ಕಾರದ ಜನಪರ ಯೋಜನೆಗಳು ಹಾಗೂ ಸರ್ಕಾರದ-ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು. ಗ್ರಾಮ ಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಬೇಕು. ನಿವೇಶನ, ವಸತಿ ರಹಿತರಿಗೆ ಸೌಲಭ್ಯ ಒದಗಿಸುವುದರ ಜತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.
ದೇವನಹಳ್ಳಿ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಜಗನ್ನಾಥ, ಹಾರೋಹಳ್ಳಿ ಗ್ರಾಪಂ ಅಧ್ಯೆ ಸುಮಾದೇವಿ ಮಂಜುನಾಥ್, ಉಪಾಧ್ಯೆ ನರಸಮ್ಮ ಪೂಜಪ್ಪ, ಬಮೂಲ ನಿರ್ದೇಶಕ ಎಸ್.ಪಿ ಮುನಿರಾಜು, ಕೆಪಿಸಿಸಿ ಸದಸ್ಯ ಚಿನ್ನಪ್ಪ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಪಿಡಿಒ ಎಸ್.ಎಂ.ಡಿ ಇಸಾಕ್, ಕಾರ್ಯದರ್ಶಿ ರಾಜೇಶ್ ಇದ್ದರು.