ಜಿಲ್ಲೆ

ವೀರಯೋಧರನ್ನು ಸ್ಮರಿಸುವ ವಿಶೇಷ ದಿನವಾಗಲಿ

ಇಂದಿರಾ ಎನ್ ಕೆ

ಕಾರ್ಕಳ: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಮುಖ್ಯ. ಹೆತ್ತವರಿಗೆ ಉತ್ತಮ ಮಗನಾಗಿ, ದೇಶಕ್ಕೆ ಉತ್ತಮ ಪ್ರಜೆಯಾದರೆ ಜನ್ಮ ಸಾರ್ಥಕವಾಗುವುದು. ಈ ದಿನ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರಯೋಧರನ್ನು ಸ್ಮರಿಸಿಕೊಳ್ಳುವ ವಿಶೇಷ ದಿನವಾಗಲಿ ಎಂದು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಹೇಳಿದರು.

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ 79ನೇ ಸ್ವಾತಂತ್ರೊೃೀತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಡಿಯಾಳಿ ಕಮಲಾಬಾಯಿ ಪ್ರೌಢಶಾಲೆ ನಿವೃತ್ತ ಮುಖ್ಯಶಿಕ್ಷಕ ಸುದರ್ಶನ್, ಪ್ರಾಂಶುಪಾಲ ಸಂತೋಷ್, ಉಪಪ್ರಾಂಶುಪಾಲ ಪ್ರಕಾಶ್ ಜೋಗಿ ಮತ್ತಿತರರು ಉಪಸ್ಥಿತರಿದ್ದರು.