ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಪಂ ಕಚೇರಿ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಗ್ರಾಪಂ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಖಾಯಂ ಜನತಾ ನ್ಯಾಯಾಲಯ ಕುರಿತು ಜಾಗತಿ ಕಾರ್ಯಕ್ರಮವನ್ನು ಜೆಎಂಎ್ಸಿಯ ಒಂದನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ಮಂಜುಳಾ ಶಿವಪ್ಪ ಹತ್ತಿಮರದ್, ಹಿರಿಯ ಸಿವಿಲ್ ನ್ಯಾಯಾಧೀಶ ಗುಡ್ಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ ಇತರರಿದ್ದರು. 
ಜಿಲ್ಲೆ

ಕಾನೂನು ಪ್ರತಿಯೊಬ್ಬರಿಗೂ ತಲುಪಲಿ

Kopala - Desk - Eraveni

ಗಂಗಾವತಿ: ನ್ಯಾಯಾಂಗ ವ್ಯವಸ್ಥೆ ಎಲ್ಲರಿಗೂ ಅಗತ್ಯವಾಗಿದ್ದು, ವ್ಯಾಜ್ಯಗಳ ಇತ್ಯರ್ಥಕ್ಕೆ ಖಾಯಂ ಜನತಾ ನ್ಯಾಯಾಲಯ ಪೂರಕವಾಗಿದೆ ಎಂದು ಜೆಎಂಎ್ಸಿಯ ಒಂದನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಹೇಳಿದರು.

ತಾಲೂಕಿನ ವಡ್ಡರಹಟ್ಟಿ ಗ್ರಾಪಂ ಕಚೇರಿ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಗ್ರಾಪಂ, ಕಂದಾಯ ಇಲಾಖೆ, ತಾಪಂ ಸಹಯೋಗದೊಂದಿಗೆ ಬುಧವಾರ ಹಮ್ಮಿಕೊಂಡಿದ್ದ ಖಾಯಂ ಜನತಾ ನ್ಯಾಯಾಲಯ ಕುರಿತು ಜಾಗತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವಿಚಾರಕ್ಕೂ ಸಾರ್ವಜನಿಕರು ನ್ಯಾಯಾಲಕ್ಕೆ ಬರುತ್ತಿದ್ದು, ಕ್ಲಿಷ್ಟಕರ ಸಮಸ್ಯೆಗಳ ಇತ್ಯರ್ಥ ಜತೆಗೆ ಸುಲಭ ಪ್ರಕ್ರಿಯೆಗಳ ಮೂಲಕ ದಾವೆಗಳನ್ನು ಇತ್ಯರ್ಥಪಡಿಸುವುದು ನ್ಯಾಯಾಂಗದ ಉದ್ದೇಶ. ಕಾನೂನು ಪ್ರತಿಯೊಬ್ಬರಿಗೂ ತಲುಪಬೇಕಿದ್ದು, ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ವಕೀಲರ ಸಂಘದ ತಾಲೂಕು ಕಾರ್ಯದರ್ಶಿ ಎಚ್.ಎಂ.ಮಂಜುನಾಥ ಉಪನ್ಯಾಸ ನೀಡಿ, 1987ರ ಕಾನೂನು ಸೇವೆ ಪ್ರಾಧಿಕಾರ ಕಾಯ್ದೆ ಪ್ರಕಾರ ವ್ಯಾಜ್ಯಗಳನ್ನು ನ್ಯಾಯಾಲಯದ ಹೊರಗಡೆ ಇತ್ಯರ್ಥಪಡಿಸಿಕೊಳ್ಳುತ್ತಿದ್ದರು. 2007ರಲ್ಲಿ ರಾಜ್ಯ ಸರ್ಕಾರ ಕಾಯ್ದೆ ತಿದ್ದುಪಡಿ ತಂದು, ಖಾಯಂ ಜನತಾ ನ್ಯಾಯಾಲಯ ಸ್ಥಾಪಿಸಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಮಂಜುಳಾ ಶಿವಪ್ಪ ಹತ್ತಿಮರದ್, ಹಿರಿಯ ಸಿವಿಲ್ ನ್ಯಾಯಾಧೀಶ ಗುಡ್ಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ, ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಮೇಘಾ ಸೋಮಣ್ಣನವರ್, ಪ್ರಭಾರ ತಹಸೀಲ್ದಾರ್ ರವಿ ಎಸ್.ಅಂಗಡಿ, ತಾಪಂ. ಇಒ ರಾಮರೆಡ್ಡಿ ಪಾಟೀಲ್, ಸಿಡಿಪಿಒ ಜಯಶ್ರೀ ರಾಜಪುರೋಹಿತ್, ಪಿಡಿಒ ಸುರೇಶ ಚಲವಾದಿ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಎಸ್.ಎನ್. ನಾಯಕ, ಉಪಾಧ್ಯಕ್ಷ ಪ್ರಕಾಶ ಕುಸಬಿ ಇತರರಿದ್ದರು.