ಹರಪನಹಳ್ಳಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಬಿಇಒ ಎಚ್.ಲೇಪಾಕ್ಷಪ್ಪ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಹೊನ್ನತ್ತೆಪ್ಪ, ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಕೆ.ನಾಗರಾಜ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜನಾರ್ದನ ರೆಡ್ಡಿ, ಪದಾಧಿಕಾರಿಗಳಾದ ಜಯಪ್ರಕಾಶ್, ಬಂದೋಳ್ ಸಿದ್ದೇಶ್ ಇತರರಿದ್ದರು. 
ಜಿಲ್ಲೆ

ಪ್ರತಿಭೆಗೆ ತಕ್ಕ ಪ್ರತಿಫಲ ಸಿಗಲಿ

ಗಾಯತ್ರಿ ಮಾಲಿಪಾಟೀಲ್

ಹರಪನಹಳ್ಳಿ: ಕ್ರೀಡೆಯಲ್ಲಿ ಸೋಲು, ಗೆಲುವು ಸಮನಾಗಿ ಸ್ವೀಕರಿಸಿದರೆ ಕ್ರೀಡೆಯ ಮಹತ್ವ ಹೆಚ್ಚುತ್ತದೆ ಎಂದು ಬಿಇಒ ಎಚ್.ಲೇಪಾಕ್ಷಪ್ಪ ಹೇಳಿದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಾತನಾಡಿದರು. ಶಾಲಾ ಹಂತದಲ್ಲಿ ಪ್ರತಿಭೆಗೆ ಅನುಸಾರ ಆಟವಾಡಲು ಮಕ್ಕಳಿಗೆ ಸಹಕರಿಸಬೇಕು. ದೇಶದಲ್ಲಿ ಕ್ರೀಡೆಗೆ ವಿಶೇಷ ಮಹತ್ವ ದೊರೆಯುತ್ತಿದ್ದು, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಉತ್ತಮ ವೇದಿಕೆಯಾಗಲಿದೆ. ತೀರ್ಪುಗಾರರು ಮಕ್ಕಳ ಭವಿಷ್ಯವನ್ನು ಗಮನ ದಲ್ಲಿಟ್ಟುಕೊಂಡು ಪ್ರಾಮಾಣಿಕವಾಗಿ ತೀರ್ಮಾನ ಪ್ರಕಟಿಸಿದಾಗ ಪ್ರತಿಭೆಗೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ತಿಳಿಸಿದರು.

ತಾಪಂ ಇಒ ಕೆ.ಷಣ್ಮುಖಪ್ಪ ಮಾತನಾಡಿ, ಶಿಕ್ಷಣದ ಜತೆ ಆಟಗಳಲ್ಲಿ ಭಾಗವಹಿಸುವುದರಿಂದ ಮಗುವಿನ ಆರೋಗ್ಯದ ಜತೆ ದೈಹಿಕ ಸಾಮರ್ಥ್ಯ ಹೆಚ್ಚಾಗಿ ಮಾನಸಿಕ ಸಮತೋಲನ ಕಂಡುಕೊಳ್ಳಬಹುದು. ಕ್ರೀಡೆಯಲ್ಲಿ ಸಹೋದರತ್ವ ಭಾವನೆಯಿಂದ ಪಾಲ್ಗೊಳ್ಳಬೇಕು. ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಇರುತ್ತದೆ. ಅದನ್ನು ಹೊರತರಲು ಇಂಥ ಸ್ಪರ್ಧೆಗಳು ಸಹಕಾರಿಯಾಗಲಿವೆ. ದೃಢ ನಿರ್ಧಾರಗಳಿದ್ದರೆ ಎತ್ತರಕ್ಕೆ ಬೆಳೆಯಬಹುದು. ಗ್ರಾಮೀಣ ಪ್ರದೇಶದಿಂದ ಆಯ್ಕೆಯಾದ ಕ್ರೀಡಾಪಟುಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ್ದಾರೆ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಹೊನ್ನತ್ತೆಪ್ಪ, ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಜಯಪ್ರಕಾಶ್, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಜಯಣ್ಣ ಪೂಜಾರ, ಜಿಲ್ಲಾ ಗೌರವಾಧ್ಯಕ್ಷ ಎಸ್.ಆರ್.ನಾರೇರ್, ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಕೆ.ನಾಗರಾಜ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜನಾರ್ದನ ರೆಡ್ಡಿ, ಪ್ರಮುಖರಾದ ಎಸ್.ರಾಮಪ್ಪ, ರಾಮಚಂದ್ರಪ್ಪ, ದಂಡೆಪ್ಪ, ದಾದಾಪೀರ್, ಲಕ್ಮೀದೇವಿ, ನಂದಿನಿ ಒಡೆಯರ್, ನಾಗರತ್ನಮ್ಮ, ಎಂ.ರಮೇಶ್ ಇತರರಿದ್ದರು.