ಜಿಲ್ಲೆ

ಬಿಜೆಪಿ ಸಂಘಟನೆ ನಿರಂತರ ಇರಲಿ; ಸಿಟಿ ರವಿ

ಚಿತ್ರದುರ್ಗ: ಸಂಘಟನಾತ್ಮಕವಾಗಿ ಪ್ರಬಲವಾದಷ್ಟು ಚುನಾವಣೆಗಳಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಅವರನ್ನು ಸುಲಭವಾಗಿ ಗೆಲ್ಲಿಸಲು ಸಹಕಾರಿಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಭಾನುವಾರ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿ, ಹೀಗಾಗಿ ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯಚಟುವಟಿಕೆ ಹಮ್ಮಿಕೊಳ್ಳಿ ಎಂದು ಸಲಹೆ ನೀಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ನಗರ ಕಾರ್ಯದರ್ಶಿ ಕಿರಣ್, ಯಶವಂತ್ ಇತರರಿದ್ದರು.