ನರೇಗಲ್ಲ : ಪ್ರತಿಯೊಬ್ಬ ವಿದ್ಯಾರ್ಥಿ ಕಲೆ, ಸಂಸ್ಕೃತಿ, ಉಡುಪು ಪ್ರದರ್ಶಿಸಲು ಕಳಕೊಣ್ಣವರ ಕಾಲೇಜ್ ವೇದಿಕೆ ಮಾಡಿಕೊಟ್ಟಿದೆ. ಆದರೆ, ಇದು ಕೇವಲ ಒಂದು ದಿನಕ್ಕೆ ಸೀಮಿತ ಆಗಬಾರದು. ಜಾನಪದ ಎಂಬುದು ನಿರಂತರ ಹವ್ಯಾಸ ಆಗಬೇಕು ಎಂದು ಗದಗ ಎಎಸ್‌ಎಸ್ ಕಾಲೇಜ್ ಪ್ರಾಧ್ಯಾಪಕ ಬಾಹುಬಲಿ ಜೈನರ ಹೇಳಿದರು.
ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಬುಧವಾರ ಆಯೋಜಿಸಿದ್ದ ಜಾನಪದ ಉತ್ಸವದಲ್ಲಿ ಅವರು ಉಪನ್ಯಾಸ ನೀಡಿದರು.
ಪ್ರಾಂಶುಪಾಲ ಎಸ್.ಎಲ್. ಗುಳೇದಗುಡ್ಡ ಮಾತನಾಡಿದರು. ಹಳ್ಳಿ ಸೊಗಡಿನ ಸ್ಪರ್ಧೆಗಳು, ಜಾನಪದ ವಿಭಾಗದ ಸ್ಪರ್ಧೆಗಳು ನಡೆದವು. ಶಿವಮೂರ್ತಿ ಕುರೇರ, ಎಸ್.ಎಸ್. ಸೂಡಿ, ಸುನಂದಾ ಮುಂಜಿ, ಜಯಶ್ರೀ ಮುತಗಾರ, ಅಂಜನಮೂರ್ತಿ ಕೆ.ಎಚ್., ಅನೀಲಕುಮಾರ, ಶಶಿಕಲಾ ವಿ.ಎಸ್., ಕೆ.ಆರ್. ಪಾಟೀಲ, ನಸ್ರೀನ್‌ಬಾನು ಜಮಾದಾರ, ಶಿವಪ್ಪ ಕುರುಬರ, ಎಂ.ಎಫ್. ತಹಸೀಲ್ದಾರ, ವಿ.ಸಿ. ಇಲ್ಲೂರ, ವಿ.ಕೆ. ಸಂಗನಾಳ, ಕೆ.ಎನ್. ಕಟ್ಟಿಮನಿ, ಕಿರಣ ರಂಜಣಗಿ, ಎನ್.ಎಸ್. ಹೊನ್ನೂರ, ಚಂದ್ರು ಸಂಶಿ, ಬಸವರಾಜ ಎಸ್.ಮಡಿವಾಳರ, ಬಿ.ಕೆ. ಕಂಬಳಿ, ಶಶಿಕಲಾ ಕಿನ್ನಾಳ, ವಿನಯಶ್ರೀ ಪರಯ್ಯನಮಠ, ಪ್ರೇಮಾ ಕಾತ್ರಾಳ, ಶ್ವೇತಾ ಹುಣಸಿಮರದ, ಶಂಕರ ನರಗುಂದ, ಸಿದ್ದು ನವಲಗುಂದ, ಮಲ್ಲಪ್ಪ ಸಮಗಂಡಿ, ಇತರರಿದ್ದರು.