ಚಿಕ್ಕಕಣಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಟ್ರಾೃಕ್ ಸ್ಯೂಟ್ ವಿತರಿಸಲಾಯಿತು. 
ಜಿಲ್ಲೆ

ವಿದ್ಯಾರ್ಥಿಗಳು ಉತ್ತಮ ಭವಿಷ್ಯ ಕಂಡುಕೊಳ್ಳಲಿ

ಅಭಿನಯ್ ಎಚ್.ಎಂ

ಆಲೂರು: ಉತ್ತಮ ಶಿಕ್ಷಣ ಹಾಗೂ ಶಿಕ್ಷಕರಿಂದ ಮಾತ್ರ ವಿದ್ಯಾರ್ಥಿಗಳು ಭವಿಷ್ಯ ಕಂಡುಕೊಳ್ಳಲು ಸಾಧ್ಯ ಎಂದು ಎಸ್‌ಡಿಎಂಸಿ ಸದಸ್ಯ ಶರತ್ ಹೇಳಿದರು.

ತಾಲೂಕಿನ ಪಾಳ್ಯ ಹೋಬಳಿಯ ಚಿಕ್ಕಕಣಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಟ್ರಾೃಕ್ ಸ್ಯೂಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ಆಗುತ್ತಿದ್ದು, ವಿದ್ಯಾರ್ಥಿಗಳು ಇಂದಿನ ಪರಿಸ್ಥಿತಿಗೆ ಹೊಂದಿಕೊಂಡು ಶಿಕ್ಷಣ ಪಡೆಯಬೇಕು. ಸತತ ಪ್ರಯತ್ನ, ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದರು.

ಮುಖ್ಯ ಶಿಕ್ಷಕ ಮೋಹನ್ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನ ಶೀಲರಾಗಬೇಕು ಎಂದು ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಲೂರು ತಾಲೂಕು ಕಾರ್ಯದರ್ಶಿ ಶ್ರೀನಿವಾಸ್, ನೌಕರರ ಸಂಘದ ನಿರ್ದೇಶಕ ರವಿ, ಗೌರವಾಧ್ಯಕ್ಷ ವರದರಾಜು, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಚಂದ್ರು ಕುಮಾರ್, ಸಹ ಶಿಕ್ಷಕರಾದ ಪುಟ್ಟಸ್ವಾಮಿ, ನಾಗವೇಣಿ, ಪವನ್‌ಕುಮಾರ್ ಹಾಜರಿದ್ದರು.