ಜಿಲ್ಲೆ

ಮಂಗಳೂರು ಮಹಾನಗರ ಪಾಲಿಕೆ ಕಂಟ್ರೋಲ್ ರೂಂ

Mangaluru - Hariprasad Rai


ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯಿಂದಾಗಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಸಂಭವಿಸುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ
ದ.ಕ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯೊಂದಿಗೆ ಆರೆಂಜ್ ಅಲರ್ಟ್ ಘೋಷಣೆಯಾಗಿರುವುದರಿಂದ ಪಾಲಿಕೆ ವತಿಯಿಂದ ಸಾಕಷ್ಟು ಮುಂಜಾಗ್ರತಾ ಹಾಗೂ ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬರುವ ಮುಂಗಾರು ಮಳೆಗಾಲದ ಅವಧಿಯಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪದ ತುರ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ವಿವಿಧ ಇಲಾಖೆಯ ಸಮನ್ವಯತೆಯಲ್ಲಿ ಕೈಗೊಳ್ಳುವ ಸಲುವಾಗಿ ವಾರ್ಡ್‌ವಾರು ಇನ್ಸಿಡೆಂಟ್ ಕಮಾಂಡರ್‌ಗಳನ್ನು ನೇಮಿಸಲಾಗಿದೆ. ಅವರು ಮಳೆಗಾಲದ ಅವಧಿಯಲ್ಲಿ ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು ತಮ್ಮ ಕಾರ್ಯವ್ಯಾಪ್ತಿಗೆ ಒಳಪಟ್ಟಂತೆ ಪಾಕೃತಿಕ ವಿಕೋಪಕ್ಕೆ ಸಂಬಂಧಪಟ್ಟ ಘಟನೆಗಳಿಗೆ ಹಾಗೂ ಸಾರ್ವಜನಿಕ ದೂರುಗಳಿಗೆ ತುರ್ತಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಾದ ನಿರ್ದೇಶನ ನೀಡಲಾಗಿದೆ.
ಸಾರ್ವಜನಿಕರು ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತಮ್ಮ ಪ್ರದೇಶದ ಇನ್ಸಿಡೆಂಟ್ ಕಮಾಂಡರ್‌ಗಳನ್ನು ಅಥವಾ ಪಾಲಿಕೆಯ ಸಹಾಯವಾಣಿ ಸಂಖ್ಯೆ -0824-2220306, 2220319 ಗೆ ಅಥವಾ ವಾಟ್ಸ್‌ಅಪ್ ಸಂಖ್ಯೆ 9449007722 ಸಂಪರ್ಕಿಸ ಬಹುದೆಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.