ಹುಬ್ಬಳ್ಳಿ: ಗೋಕುಲ ರಸ್ತೆಯ ಕೆಎಲ್ಇ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಇಲೆಕ್ಟ್ರಿಕಲ್ಸ್ ಆಂಡ್ ಇಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿ ಮೊಹಮ್ಮದ್ ಅಖ್ತರ್ ಎಂ. ರಾಯಭಾಗ ಬಿಇ ಪದವಿಯಲ್ಲಿ ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯಕ್ಕೆ 8ನೇ ರ್ಯಾಂಕ್ ಗಳಿಸಿದ್ದಾರೆ.
ವಿಶ್ವ ವಿದ್ಯಾಲಯಕ್ಕೆ ರ್ಯಾಂಕ್ ಬಂದಿರುವುದಕ್ಕೆ ಸಂತಸವಾಗಿದೆ. ಎಲ್ಲ ವಿಭಾಗದ ಪ್ರಾಧ್ಯಾಪಕರು, ಕುಟುಂಬ ವರ್ಗ ಹಾಗೂ ಸ್ನೇಹಿತರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ಮೊಹಮ್ಮದ್ ಅಖ್ತರ್ ಹೇಳಿದ್ದಾರೆ.
ಮೊಹಮ್ಮದ್ ಆಖ್ತರ್ ವಿಟಿಯುಗೆ ರ್ಯಾಂಕ್ ಪಡೆದಿರುವುದು ನಮಗೆಲ್ಲ ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿಯ ಕಠಿಣ ಪರಿಶ್ರಮ, ಸಮರ್ಪಣೆ ಹಾಗೂ ಶೈಕ್ಷಣಿಕ ಶ್ರೇಷ್ಠತೆಗೆ ಸಾಕ್ಷಿಯಾಗಿದೆ ಎಂದು ಪ್ರಾಚಾರ್ಯ ಡಾ. ಶರದ ಜೋಶಿ ಪ್ರಶಂಸಿಸಿದ್ದಾರೆ.