ಜಿಲ್ಲೆ

ಎಂಡಿಎಂಎ ಸಾಗಿಸುತ್ತಿದ್ದ ನಾಲ್ವರ ಸೆರೆ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ


ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಎಂಡಿಎಂಎ (ಮಾದಕ ವಸ್ತು) ಸಾಗಾಟ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿದ್ದಾರೆ.


270 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಕಾರಿನಲ್ಲಿ ಎಂಡಿಎಂಎ ಸಾಗಾಟದ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆಯ ಪರಿಸರದಲ್ಲಿ ಕಾರನ್ನು ಪತ್ತೆ ಹಚ್ಚಿ ಆರೋಪಿಗಳಾದ ಬಿಜೈ ನಿವಾಸಿ ಮೊಹಮ್ಮದ್ ಅಮೀನ್ ರಾಫಿ(23), ಅಡ್ಡೂರು ಬಂಡ್ಸಾಲೆ ಹೌಸ್ ನಿವಾಸಿ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರು ನಿವಾಸಿ ಮೊಹಮ್ಮದ್ ನೌಮಾನ್(22) ಹಾಗೂ ಬೋಳಿಯಾರ್ ನಿವಾಸಿ ಮೊಹಮ್ಮದ್ ಸಫೀಲ್(23) ಎಂಬುವರನ್ನು ಬಂಧಿಸಿದ್ದಾರೆ.


ಆರೋಪಿಗಳ ಬಳಿಯಿದ್ದ 6.50 ಲಕ್ಷ ರೂ ಮೌಲ್ಯದ 270 ಗ್ರಾಂ ಎಂಡಿಎಂಎ, 4 ಮೊಬೈಲ್ ಫೋನ್‌ಗಳು, ಕಾರು, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 14 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್.ಎಂ, ಕಾನ್‌ಸ್ಟೆಬಲ್ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.