ಜಿಲ್ಲೆ

ಕನ್ನಡ ಸೇನೆ ತಾಲೂಕು ಘಟಕಕ್ಕೆ ಆಯ್ಕೆ

ಎ. ಆರ್. ರಘುರಾಮ

ಮದ್ದೂರು: ಕನ್ನಡ ಸೇನೆಯ ತಾಲೂಕು ಅಧ್ಯಕ್ಷರಾಗಿ ಅಣ್ಣೂರು ರಾಘವೇಂದ್ರ ಹಾಗೂ ಉಪಾಧ್ಯಕ್ಷರಾಗಿ ಪ್ರಜ್ವಲ್ ಆಯ್ಕೆಯಾಗಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಜಿಲ್ಲಾಧ್ಯಕ್ಷ ಮಂಜುನಾಥ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ತಾಲೂಕು ಘಟಕದ ಸಭೆಯಲ್ಲಿ ಸರ್ವಾನುಮತದಿಂದ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಸೇನೆಯ ಜಿಲ್ಲಾಧ್ಯಕ್ಷ ಮಂಜುನಾಥ್, ಕನ್ನಡ ಸೇನೆ ಹಲವು ವರ್ಷಗಳಿಂದ ಕನ್ನಡ ಪರ ಹೋರಾಟ ಮಾಡುವುದರ ಜತೆಗೆ ಸಮಾಜಮುಖಿಯಾಗಿ ಹಲವು ಕೆಲಸ ಮಾಡುತ್ತಿದೆ. ನೊಂದವರ ಬಾಳಿಗೆ ದನಿಯಾಘಿದೆ ಎಂದರು. ಸೇನೆಯ ಜಿಲ್ಲಾ ಉಪಾಧ್ಯಕ್ಷ ಮಧುಕುಮಾರ್, ರಾಜ್ಯ ಸಂಚಾಲಕ ಮಹಾಂತಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಮಂಜುನಾಥ್, ಜಿಲ್ಲಾ ಸಂಚಾಲಕ ರಮೇಶ್ ಇತರರು ಇದ್ದರು.