ಚಿತ್ರದುರ್ಗ: ಜಿಲ್ಲಾಡಳಿತದಿಂದ ಫೆ.18ರಂದು ಕಾಯಕ ಶರಣರಾದ ಮಾದರ ಚೆನ್ನಯ್ಯ,ಮಾದರ ಧೂಳಯ್ಯ,ಡೋಹರ ಕಕ್ಕಯ್ಯ,ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವುದಾಗಿ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.
ಡಿಸಿ ಕಚೇರಿಯಲ್ಲಿ ಗುರುವಾರ ಕಾಯಕ ಶರಣರ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ,ಪತ್ರಕರ್ತರ ಭವನದಲ್ಲಿ 18 ರಂದು ಬೆಳಗ್ಗೆ 11ಕ್ಕೆ ಕಾಯಕ ಶರಣರ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ,ಅವರ ವಚನಗಳ ಕುರಿತು ಗೀತಗಾಯನ,ವಿಶೇಷ ಉಪನ್ಯಾಸ ಏರ್ಪಡಿ ಸಲಾಗುವುದು ಎಂದರು.
ಮುಖಂಡ ಬಿ.ರಾಜಪ್ಪ ಮಾತನಾಡಿ,ಅಂದು ಬೆಳಗ್ಗೆ 10ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾ ಡಿ,ಅಲ್ಲಿಂದ ಪತ್ರಕರ್ತರ ಭವನದವರೆಗೂ ಕಲಾತಂಡಗಳೊಂದಿಗೆ ಮೆರವಣಿಗೆ ಏರ್ಪಡಿಸಲಾಗುವುದು. ನಗರದ ಪ್ರಮುಖ ರಸ್ತೆಗಳಲ್ಲಿ ಜ ಯಂತಿ ಆಚರಣೆ ಕುರಿತಾದ ಬ್ಯಾನರ್‌ಗಳನ್ನು ಅಳವಡಿಸ ಬೇಕೆಂದರು.
ನಗರಸಭಾ ಮಾಜಿ ಅಧ್ಯಕ್ಷ ಡಿ.ಎನ್.ಮೈಲಾರಪ್ಪ ಮಾತನಾಡಿ,ಕಾರ‌್ಯಕ್ರಮಕ್ಕೆ ಜಿಲ್ಲಾ,ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದ ವಿದ್ಯಾರ್ಥಿಗಳು ಭಾಗವಹಿಸ ಬೇಕೆಂದರು. ಎಎಸ್ಪಿ ಕುಮಾರಸ್ವಾಮಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ,ನಗರಸಭೆ ಮಾಜಿ ಅಧ್ಯಕ್ಷ ನಿರಂಜನಮೂರ್ತಿ, ಮುಖಂಡತಿಪ್ಪೇಸ್ವಾಮಿ ಹಾಗೂ ಅಧಿಕಾರಿಗಳಿದ್ದರು.