ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಆಚರಿಸಲಾಯಿತು. ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಅನಸೂಯಾ ಚಲವಾದಿ, ನೇತಾಜಿ ಗೌಡರ್​ ಮತ್ತಿತರರಿದ್ದಾರೆ. 
ಜಿಲ್ಲೆ

ಬನ್ನಿರಾಯಸ್ವಾಮಿ ಜಯಂತಿ ಅರ್ಥಪೂರ್ಣ ಆಚರಣೆ

ವಿಜಯಪುರ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಜಿ.ಪಂ. ಸಹಾಯಕ ಕಾರ್ಯದರ್ಶಿ ಅನಸೂಯಾ ಚಲವಾದಿ, ಅಗ್ರಣಿಯ ಬ್ಯಾಂಕ್​ ವ್ಯವಸ್ಥಾಪಕ ನೇತಾಜಿ ಗೌಡರ್​, ಖಾದಿ ಮಂಡಳಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಎನ್​.ಡಿ. ಕಾಂಬ್ಳೆ, ಪಾಲಿಕೆ ಉಪ ಆಯುಕ್ತ ವೈ.ಎಚ್​. ನಾರಾಯಣಕರ, ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಅರವಿಂದ ಕನ್ನೂರು ಮತ್ತಿತರರಿದ್ದರು.