ಜಿಲ್ಲೆ

ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆ, ಭದ್ರತೆಗೆ ಕ್ರಮ

ಕುಂದಾಪುರ: ತ್ರಾಸಿ ಮರವಂತೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆ ಮತ್ತು ಉಡುಪಿ ಜಿಲ್ಲೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತ್ರಾಸಿ ಮರವಂತೆ ಬೀಚ್‌ನಲ್ಲಿ ಮಂಗಳವಾರ ಚರ್ಚೆ ನಡೆಸಿದರು.

ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಸಂತರಾಮ್ ಆಚಾರ್ ವಾರ್ಗದರ್ಶನದಲ್ಲಿ ಠಾಣೆ ಪಿಎಸ್‌ಐ ಮುಕ್ತ ಬಾಯಿ, ಎಎಸ್‌ಐ ಸಂತೋಷ್ ಕುಂದರ್ ಮತ್ತು ರಾವೇಂದ್ರ ದೇವಾಡಿಗ ಅವರು ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಉಡುಪಿ ಜಿಲ್ಲೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ನಿಧೀಶ್ ಅವರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ದಳ, ಪ್ರವಾಸಿ ಮಿತ್ರ ಮತ್ತು ಲ್ೈ ಗಾರ್ಡ್‌ಗಳನ್ನು ನಿಯೋಜಿಸುವ ಕುರಿತು ಚರ್ಚೆ ನಡೆಸಲಾಯಿತು.