ಮಂಗಳೂರು : ರಾಮಕೃಷ್ಣ ಮಿಷನ್, ಮಂಗಳೂರು ಸಂಸ್ಥೆಯ 75 ವರ್ಷಗಳ ಸಂಭ್ರಮಾಚರಣೆ ಅಂಗವಾಗಿ ಅಮೃತ ಭಕ್ತಿ ಸುಧಾ
ಭಕ್ತಿ ಗಾಯನ ಕಾರ್ಯಕ್ರಮ ಅ.12ರಂದು ಸಾಯಂಕಾಲ 5ರಿಂದ ನಗರದ ಮಂಗಳಾದೇವಿಯ ರಾಮಕೃಷ್ಣ ಮಠದ
ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ನಡೆಯಲಿದೆ. ಗಾಯಕಿ ಮೇಧಾ ವಿದ್ಯಾಭೂಷಣ ಅವರು ಭಕ್ತಿಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ.
ಕೆನರಾ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಮಂಜುನಾಥ್ ಬಿ. ಸಿಂಗಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಮಕೃಷ್ಣ ಮಿಷನ್‌ನ
ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದಜಿ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಸೇನಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ
ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.