ಜಿಲ್ಲೆ

ಮಾಧ್ಯಮ ದಿನಾಚರಣೆ-ಪ್ರಶಸ್ತಿ ಪ್ರದಾನ 27ಕ್ಕೆ

Davangere - Desk - Mahesh Babu E

ದಾವಣಗೆರೆ: ಜಿಲ್ಲಾ ವರದಿಗಾರರ ಕೂಟದಿಂದ ನಗರದ ಕುವೆಂಪು ಕನ್ನಡ ಭವನದಲ್ಲಿ ಆ.27ರಂದು ಮಾಧ್ಯಮ ದಿನಾಚರಣೆ, ಮಾಧ್ಯಮ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು. ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡುವರು.

ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಪ್ರತಿಭಾ ಪುರಸ್ಕಾರ ನೀಡುವರು. ದಾವಣಗೆರೆ ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂಹವನ ಅಧ್ಯಯನ ವಿಭಾಗದ ಅಧ್ಯಕ್ಷ ಡಾ. ಶಿವಕುಮಾರ ಕಣಸೋಗಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ್ ಅತಿಥಿಗಳಾಗಿ ಭಾಗವಹಿಸುವರು. ಕೆ.ಏಕಾಂತಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಧ್ಯಮ ಪ್ರಶಸ್ತಿ ಪುರಸ್ಕೃತರು : ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್, ಪತ್ರಕರ್ತರಾದ ಮಲ್ಲಿಕಾರ್ಜುನ ಕಬ್ಬೂರು, ಸದಾನಂದ ಹೆಗಡೆ, ಎಂ.ವೈ. ಸತೀಶ್, ಆರ್. ರವಿ, ಎಸ್.ಎ. ಶ್ರೀನಿವಾಸ್, ಕಿರಣ್‌ಕುಮಾರ್, ಎ.ಸಿ. ಸಂಜಯ್, ರಾಮ್ ಪ್ರಸಾದ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರತಿಭಾ ಪುರಸ್ಕೃತರು: ಜೆ. ಆದರ್ಶ, ಎಂ. ಭೂಮಿಕಾ, ಎಂ. ಸ್ಪಂದನಾ, ಆರ್. ದೀಪಿಕಾ, ಟಿ.ಎಸ್. ಧನುಷ್, ಟಿ.ಎಸ್. ಮನೋಜ್, ಯು. ಲಾವಣ್ಯಾ, ಇ. ಪ್ರತೀಕ್ಷಾ, ಎಸ್. ತನುಶ್ರೀ, ಪ್ರಣವ್ ಜಹಗೀರದಾರ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.