ಜಿಲ್ಲೆ

"ಅವೆನ್ಸಿಸ್ 2025" ಅರೋಗ್ಯ ಪ್ರದರ್ಶನ ಮೇಳ

ಸುನಿಲ್ ಪೊನ್ನೇಟಿ

ಮಡಿಕೇರಿ:

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಡಿಕೇರಿಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಸದ್ಯದಲ್ಲಿಯೇ ಹೃದ್ರೋಗ ಚಿಕಿತ್ಸೆ ಲಭ್ಯವಾಗಲಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು. ಕಾಲೇಜು ಸ್ಥಾಪನೆಯಾಗಿ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ "ಅವೆನ್ಸಿಸ್ 2025" ಎಂಬ ಅರೋಗ್ಯ ಪ್ರದರ್ಶನ ಮೇಳ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು.

ಕೊಡಗು ಜಿಲ್ಲಾ ಆಸ್ಪತ್ರೆಯನ್ನು ಅತ್ಯಂತ ಸುಸಜ್ಜಿತ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲು ತಾವು ಬದ್ದರಾಗಿದ್ದು ಪ್ರಸ್ತುತ ಹೃದ್ರೋಗ ಚಿಕಿತ್ಸೆ ಕೇಂದ್ರ ಸ್ಥಾಪನೆಗೆ ಸರ್ಕಾರ ಒಪ್ಪಿದೆ. ಮೆಡಿಕಲ್ ವಿಧ್ಯಾರ್ಥಿಗಳ ಕಲಿಕೆಗೆ ಆರೋಗ್ಯ ಪ್ರದರ್ಶನ ಮೇಳ ಅತ್ಯಂತ ಅಗತ್ಯ ಕಾರ್ಯಕ್ರಮವಾಗಿದ್ದು ಸಾರ್ವಜನಿಕರು ಕೂಡ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಸರಾ ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ತೆನ್ನಿರ ಮೈನಾ ಮಾತನಾಡಿ ಜನರ ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ರೂಪಿಸಿದ ಮೆಡಿಕಲ್ ಕಾಲೇಜಿನ ಆಡಳಿತ ವರ್ಗ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು.

ಕೊಡಗು ಮೆಡಿಕಲ್ ಕಾಲೇಜು ನಿರ್ದೇಶಕ ಡಾ. ಲೋಕೇಶ್ ಮಾತನಾಡಿ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಆರೋಗ್ಯ ಕ್ಕೆ ಸಂಬAಧಿಸಿದ ಉಪಯುಕ್ತ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಹೆಚ್.ಒ.ಡಿ. ಡಾ ಪುರುಷೋತ್ತಮ ಮಾತನಾಡಿ ಮೆಡಿಕಲ್ ಕಾಲೇಜಿನ ವಿಚಾರದಲ್ಲಿ ಶಾಸಕರಾದ ಡಾ ಮಂತರ್ ಗೌಡ ರವರು ಸಂಪೂರ್ಣ ನೆರವು ನೀಡುತ್ತಿದ್ದು ಅದಕ್ಕೆ ಸಂಸ್ಥೆ ಅಭಾರಿಯಾಗಿದೆ ಎಂದರು.

ಆಸ್ಪತ್ರೆಯ ಮುಖ್ಯಸ್ಥ ಡಾ. ವಿಶಾಲ್, ಹೊದ್ದೂರು ಗ್ರಾಮ ಪಂಚಾಯತ್ ಅಧ್ಯಕ್ಷÀ ಹೆಚ್.ಎ. ಹಂಸ

ಡಾ ಸೋಮಶೇಖರ್, ಡಾ ಮಂಜುನಾಥ್, ಕಾರ್ಯನಿರ್ವಾಹಕ ಅಧಿಕಾರಿ ರೋಹಿಣಿ,

ನಗರ ಸಭಾ ಮಾಜಿ ಸದಸ್ಯ ಕೆ.ಜಿ.ಪೀಟರ್ ಇದ್ದರು.