ಜಿಲ್ಲೆ

ನೇತ್ರಗಳ ಅಸಡ್ಡೆ ಬೇಡ : ವೈದ್ಯ ಡಾ.ಸಾಗರ್ ಸಲಹೆ

ಸೌಮ್ಯ ಆರ್

ಮೂಲ್ಕಿ: ಪಂಚೇಂದ್ರಿಯಗಳಲ್ಲಿ ಅತಿ ಸೂಕ್ಷ್ಮಮತ್ತು ಸಂಕೀರ್ಣವಾಗಿರುವ ನೇತ್ರಗಳ ಆರೋಗ್ಯದ ಬಗ್ಗೆ ಅಸಡ್ಡೆ ಸಲ್ಲದು. ಸೂಕ್ತ ತಪಾಸಣೆ ಹಾಗೂ ಚಿಕಿತ್ಸೆಯ ಮೂಲಕ ಕಣ್ಣಿನ ಆರೋಗ್ಯವರ್ಧನೆ ಸಾಧ್ಯವಿದೆ ಎಂದು ಪ್ರಸಾದ್ ನೇತ್ರಾಲಯದ ವೈದ್ಯ ಡಾ.ಸಾಗರ್ ಹೇಳಿದರು.

ಕಿಲ್ಪಾಡಿ ಗ್ರಾಮ ಪಂಚಾಯಿತಿ, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್ ಹಾಗೂ ಪ್ರಸಾದ್ ನೇತ್ರಾಲಯ ಮಂಗಳೂರು ಸಹಯೋಗದಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಉಚಿತ ಶಿಬಿರದಲ್ಲಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಕಾಸ್ ಶೆಟ್ಟಿ, ಸದಸ್ಯರಾದ ರಾಜೇಶ್ ಕೋಟ್ಯಾನ್, ಲಲಿತಾ ಯಾದವ, ಪ್ರಸಾದ್ ನೇತ್ರಾಲಯದ ವೈದ್ಯರಾದ ಸಾಗರ್, ಪ್ರಾಥಮಿಕ ಆರೋಗ್ಯ ಕೇಂದ್ರದ ಸುಮಾ, ಆಶಾ ಕಾರ್ಯಕರ್ತರು, ಪಂಚಾಯಿತಿ ಸಿಬ್ಬಂದಿ ಹಾಗೂ ಪ್ರಸಾದ್ ನೇತ್ರಾಲಯದ ವೈದ್ಯಕೀಯ ತಂಡದವರು ಉಪಸ್ಥಿತರಿದ್ದರು.