ಸಾಂದರ್ಭಿಕ ಚಿತ್ರ 
ಜಿಲ್ಲೆ

ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮಂಗಳೂರು: ಸುರತ್ಕಲ್‌ನ ಸುಭಾಷಿತ ನಗರದಲ್ಲಿ ಮಂಗಳವಾರ ಸಂಜೆ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಕಟ್ಟಡದ 5ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಬ್ಬಳ್ಳಿ ಮೂಲದ ವಿದ್ಯಾರ್ಥಿನಿ ಸುರತ್ಕಲ್ ಬಂಟರ ಸಂಘದ ಬಳಿಯ ಫ್ಲಾಟ್‌ನಲ್ಲಿ ಪೋಷಕರೊಂದಿಗೆ ವಾಸವಿದ್ದರು. ಮಂಗಳವಾರ ಕಟೀಲು ದೇವಳಕ್ಕೆ ತೆರಳಿ ವಾಪಸ್ಸಾದ ಬಳಿಕ ಏಕಾಏಕಿ 5ನೇ ಅಂತಸ್ತಿಗೆ ತೆರಳಿ ಕೆಳಗೆ ಜಿಗಿದಿದ್ದಾರೆ. ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ವಿದ್ಯಾರ್ಥಿನಿಯನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.