ಮಂಡ್ಯ: ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಡಾ.ಶಿವಕುಮಾರ ಮಹಾಸ್ವಾಮೀಜಿ ಉದ್ಯಾನದಲ್ಲಿ ನಿರ್ಮಾಣವಾಗುತ್ತಿರುವ ಧ್ಯಾನ ಮಂದಿರ ಹಾಗೂ ಪಾರ್ಕ್ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು.
ಕಾಯಕಯೋಗಿ ಫೌಂಡೇಷನ್ ನಿರ್ವಹಣೆ ಮಾಡುತ್ತಿರುವ ಉದ್ಯಾನವನ ಹಸಿರಿನಿಂದ ಕಂಗೊಳಿಸುತ್ತಿದ್ದು, ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು. ಅದೇ ರೀತಿ ಧ್ಯಾನಮಂದಿರದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುವ ಭರವಸೆ ನೀಡಿದರು.
ತಾ.ಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಕಾಯಕಯೋಗಿ ಫೌಂಡೇಷನ್ ಅಧ್ಯಕ್ಷ ಎಂ.ಶಿವಕುಮಾರ್, ಮುಖಂಡರಾದ ಎಂ.ಎಸ್.ಮಂಜುನಾಥ್, ಎಂ.ಆರ್.ರಘು, ಶಿವನಂಜು, ಬಸರಾಳು ಬಸವರಾಜ್, ಗುತ್ತಿಗರದಾರ ಭೈರಪ್ಪ, ಮಲ್ಲಿಕಾರ್ಜುನಯ್ಯ, ಬಿ.ಎಸ್.ಅನುಪಮಾ, ಜಗದೀಶ್ ಇತರರಿದ್ದರು.