ಜಿಲ್ಲೆ

ವಿವಿಧ ಇಲಾಖೆಗಳಿಗೆ ನಿವೇಶನ ಒದಗಿಸುವ ಬಗ್ಗೆ ಚರ್ಚೆ

ಸುನಿಲ್ ಪೊನ್ನೇಟಿ

ಮಡಿಕೇರಿ:

ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ, ಐಟಿಡಿಪಿ, ಕೌಶಲ್ಯಾಭಿವೃದ್ಧಿ ಹೀಗೆ ವಿವಿಧ ಇಲಾಖೆಗಳಿಗೆ ನಿವೇಶನ ಒದಗಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ನಿವೇಶನ ಹಂಚಿಕೆ ಬಗ್ಗೆ ಮಾಹಿತಿ ನೀಡಿದರು. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾವೇರಿ ನದಿ ಪಾತ್ರದಲ್ಲಿ ಪರಿಸರ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಸಂಬAಧ ಜಿ.ಪಂ. ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಮಾಹಿತಿ ನೀಡಿದರು.

ಬಸವ, ಅಂಬೇಡ್ಕರ್ ಹಾಗೂ ಇಂದಿರಾ ವಸತಿ ಯೋಜನೆ ಪ್ರಗತಿ ಸಾಧಿಸುವಂತಾಗಬೇಕು. ಕುಡಿಯ ಸೇರಿದಂತೆ ಲೈನ್‌ಮನೆಗಳಲ್ಲಿ ವಾಸಿಸುವ ಎಲ್ಲಾ ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು. ಜೊತೆಗೆ ಸರ್ಕಾರದ ಸೌಲಭ್ಯಗಳು ಆದಿವಾಸಿ ಜನರಿಗೆ ತಲುಪುವಂತಾಗಬೇಕು.ಗಿರಿಜನ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಜತೆ ಚರ್ಚಿಸಿ ಆಧಾರ್ ಕಾರ್ಡ್ ಮಾಡಿಸುವ ಸಂಬAಧ ತುರ್ತು ಕ್ರಮವಹಿಸಬೇಕು. ರಸ್ತೆ ಸುರಕ್ಷತಾ ಸಮಿತಿ ಸಭೆಯನ್ನು ಪ್ರತೀ ತಿಂಗಳು ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಇದೇ ವೇಳೆ ಸಲಹೆ ಮಾಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2, ಸಮುದಾಯ ಆರೋಗ್ಯ ಕೇಂದ್ರದಲ್ಲಿ 16, ಜನರಲ್ ವಿಭಾಗದಲ್ಲಿ 12 ವೈದ್ಯರ ಹುದ್ದೆಗಳು ಖಾಲಿ ಇದ್ದು, ಯಾರೂ ಮುಂದೆ ಬರುತ್ತಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಟರಾಜು ಮಾತಡಿ ಜಿಲ್ಲೆಯಲ್ಲಿ 1,16,772 ಮಂದಿ ಗೃಹಲಕ್ಷಿö್ಮ ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ ಎಂದರು.

ಶನಿವಾರಸAತೆ ಬಸ್ ನಿಲ್ದಾಣ ಕಾಮಗಾರಿ ಪ್ರಗತಿ ಹಾಗೂ ಕುಶಾಲನಗರದಲ್ಲಿ ಬಸ್ ಡಿಪೋ ಕಾಮಗಾರಿ ಪ್ರಗತಿ ಸಂಬAಧಿಸಿದAತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕ ಮೆಹಬೂಬ್ ಅಲಿ ಸೆಪ್ಟೆಂಬರ್ ಅಂತ್ಯದೊಳಗೆ ಈ ಎರಡು ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಮಾಹಿತಿ ನೀಡಿದರು.

ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ.ಅಕ್ಕಿಯನ್ನು ವಿತರಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಡಿಡಿ ಕುಮುದಾ ಶರತ್ ತಿಳಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ಹಲವು ಮಾಹಿತಿ ನೀಡಿದರು.

ಜಿ.ಪಂ.ಉಪಕಾರ್ಯದರ್ಶಿ ಅಬ್ದುಲ್ ನಬಿ, ಲೋಕೋಪಯೋಗಿ ಇಲಾಖೆಯ ಇಇ ಇಬ್ರಾಹಿಂ, ಪಂಚಾಯತ್ ರಾಜ್ ಎಂಜಿನಿಯರ್ ಇಇ ನಾಯಕ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜ ದೊಡ್ಡಮನಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಚಿನ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಮೋಹನ್ ಕುಮಾರ್, ಅನಂತ ಶಂಕರ್, ತಾ.ಪಂ.ಇಒಗಳಾದ ಪರಮೇಶ್ವರ, ಅಪ್ಪಣ್ಣ, ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ ನಾಯಕ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕೃಷ್ಣಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ಮತ್ತಿತರರು ಸಭೆಯಲ್ಲಿದ್ದು ಮಾಹಿತಿ ನೀಡಿದರು.