ಜಿಲ್ಲೆ

ಅನುದಾನಿತ ಪ್ರೌಢಶಾಲಾ, ಕಾಲೇಜು ನೌಕರರ ಸಂಘದ ಸಭೆ

ಸುನಿಲ್ ಪೊನ್ನೇಟಿ

ಮಡಿಕೇರಿ:

ವೇತನ ತಾರತಮ್ಯ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಸಂಬAಧಿಸಿದAತೆ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲು ಹಾಗೂ ಸರ್ಕಾರಕ್ಕೆ ಪತ್ರ ಬರೆಯಲು ಇಲ್ಲಿನ ಸಂತ ಮೈಕಲರ ಶಾಲೆಯ ಸಭಾಂಗಣದಲ್ಲಿ ಶನಿವಾರ ನಡೆದ ಅನುದಾನಿತ ಪ್ರೌಢಶಾಲಾ, ಕಾಲೇಜು ನೌಕರರ ಸಂಘದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು.

ಜಿಲ್ಲೆಯ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿರುವ ಅನುದಾನಿತ ಪ್ರೌಢ ಶಾಲೆ, ಕಾಲೇಜುಗಳ ಸುಮಾರು 112 ಶಿಕ್ಷಕರು, ನೌಕರರು ಈ ಸಭೆಯಲ್ಲಿ ಭಾಗವಹಿಸಿದ್ದರು. ಈಗಾಗಲೇ ವೇತನ ತಾರತಮ್ಯ ಸೇರಿದಂತೆ ಹಲವು ಸಮಸ್ಯೆಗಳು ಹಾಗೂ ಹಲವು ರೀತಿಯ ತಾರತಮ್ಯಕ್ಕೆ ಒಳಗಾಗಿರುವ ಅನುದಾನಿತ ಶಾಲೆ, ಕಾಲೇಜು ಶಿಕ್ಷಕರ ವೃತ್ತಿ ಬದುಕು ಅಪಾಯದಂಚಿನಲ್ಲಿ ಸಿಲುಕಿರುವ ಕುರಿತು ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕರು ತಮ್ಮ ಆತಂಕ ಹೊರಹಾಕಿದರು.

ರಾಜ್ಯದಲ್ಲಿ ಕೊಡಗು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ. ಇದಕ್ಕೆ ಅನುದಾನಿತ ಶಾಲೆಗಳ ಕೊಡುಗೆಯೂ ಕಾರಣವಾಗಿವೆ ಎಂದು ಸಭೆಯಲ್ಲಿ ಪ್ರತಿಪಾದಿಸಲಾಯಿತು. ಒಂದು ವೇಳೆ ಬೇಡಿಕೆಗಳ ಈಡೇರಿಕೆಗೆ ಸ್ಪಂದನೆ ಸಿಗದೇ ಹೋದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ರಾಷ್ಟ್ರಪತಿಗೆ ಏಕೆ ಪತ್ರ ಬರೆಯಬಾರದು ಎನ್ನುವ ಕುರಿತೂ ಚರ್ಚೆ ನಡೆಯಿತು.

ವಿರಾಜಪೇಟೆ ತಾಲೂಕಿನಲ್ಲಿ 15, ಸೋಮವಾರಪೇಟೆ ತಾಲೂಕಿನಲ್ಲಿ 13, ಮಡಿಕೇರಿ ತಾಲೂಕಿನಲ್ಲಿ 8ಕ್ಕೂ ಅಧಿಕ ಅನುದಾನಿತ ಶಾಲೆ, ಕಾಲೇಜುಗಳಿದ್ದು ಅವುಗಳಲ್ಲಿ 300–400 ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಅನುದಾನಿತ ಶಾಲೆಗಳ ಶಿಕ್ಷಕರು, ನೌಕರರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತ ಚರ್ಚೆ ಸಭೆಯಲ್ಲಿ ನಡೆಯಿತು. ಮುಖ್ಯವಾಗಿ, ಅನುದಾನಿತ ಶಾಲೆಗಳು ಮುಚ್ಚುತ್ತಿರುವ ಕುರಿತು ಸಭೆ ತೀವ್ರ ಕಳವಳ ವ್ಯಕ್ತಪಡಿಸಿತು.

ನಾಡಿನ ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ನೀಡುವಿಕೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅನದಾನಿತ ಶಾಲೆಗಳು ಇಂದು ವಿದ್ಯಾರ್ಥಿಗಳ ಕೊರತೆಯಿಂದ ಬಾಗಿಲು ಮುಚ್ಚುವಂತಹ ಸ್ಥಿತಿಗೆ ತಲುಪಿವೆ. ಇಲ್ಲಿ ಕೆಲಸ ಮಾಡುತ್ತಿರುವ ನೌಕರರ ಬದುಕು ಈಗ ಬೀದಿಗೆ ಬರುವಂತಾಗಿದೆ ಎಂದು ಸಭೆ ತನ್ನ ಅಸಮಾಧಾನ ಹೊರಹಾಕಿತು.

ಸಂಘದ ಅಧ್ಯಕ್ಷ ಪ್ರಭುಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್. ನಾಗರಾಜು, ಮಡಿಕೇರಿ ತಾಲೂಕು ಅಧ್ಯಕ್ಷ ಶಿವಪ್ರಕಾಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ವೆಂಕಟ್ ನಾಯಕ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಗಿಡ್ಡಯ್ಯ, ಸಹಶಿಕ್ಷಕರ ಸಂಘದ ಅಧ್ಯಕ್ಷ ರವಿಕೃಷ್ಣ, ಉಪಾಧ್ಯಕ್ಷ ಮೆಹಬೂಬ್, ಕಾರ್ಯದರ್ಶಿ ಎಚ್.ಜಿ. ಕುಮಾರ್ ಮತ್ತಿತರರು ಸಭೆಯಲ್ಲಿ ಇದ್ದರು.