ಜಿಲ್ಲೆ

ಸಂವಿಧಾನ ಜಾಗೃತಿ ರಥ ಫೆ. 2 ರಿಂದ ಸಂಚಾರ

ಎ. ಆರ್. ರಘುರಾಮ

ಹೊಳೆನರಸೀಪುರ : ಸಂವಿಧಾನ ಜಾರಿಯಾಗಿ 75 ವರ್ಷವಾದ ಹಿನ್ನೆಲೆಯಲ್ಲಿ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ರಥ ಫೆ. 2 ರಿಂದ ತಾಲೂಕಿನಲ್ಲಿ ಸಂಚರಿಸಲಿದೆ ಎಂದು ತಹಸೀಲ್ದಾರ್ ಕೃಷ್ಣಮೂರ್ತಿ ತಿಳಿಸಿದರು.
ತಾಲೂಕು ಕಚೇರಿಯಲ್ಲಿ ಸಂವಿಧಾನ ರಥ ಸಂಚಾರ ಹಾಗೂ ಕಾರ್ಯಕ್ರಮ ಆಯೋಜನೆ ಕುರಿತು ಸೋಮವಾರ ಹಮ್ಮಿಕೊಂಡಿದ್ದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಫೆ. 2 ರಂದು ಹಂಗರಹಳ್ಳಿ ಮೂಲಕ ಆಗಮಿಸುವ ರಥವನ್ನು ಸಾಂಸ್ಕೃತಿಕ ಕಲಾ ತಂಡಗಳ ಪ್ರದರ್ಶನದೊಂದಿಗೆ ಬರಮಾಡಿಕೊಳ್ಳಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ಆಯೋಜನೆ ಮಾಡಲಾಗುವುದು. ಸಂವಿಧಾನದ ಆಶಯಗಳ ಸೂಕ್ತವಾಗಿ ತಿಳಿಸಿಕೊಟ್ಟು ಅರಿವು ಮೂಡಿಸಲಾಗುವುದು ಎಂದರು. ಈ ಅಭಿಯಾನ ಯಶ ಗೊಳಿಸಲು ಅಧಿಕಾರಿಗಳು, ಸಿಬ್ಬಂದಿ ಸಹಕರಿಸಬೇಕು ಎಂದರು.
ತಾ.ಪಂ.ಇಒ ಗೋಪಾಲ್ ಮಾತನಾಡಿ ರಥ ಸಂಚಾರ ಕುರಿತು ಈಗಾಗಲೇ ಗ್ರಾಮ ಪಂಚಾಯಿತಿ ಹಾಗೂ ಅಧಿಕಾರಿಗಳ ಸಭೆ ನಡೆಸಿ ಕಾರ್ಯಕ್ರಮ ಅಯೋಜನೆ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ.ಸಿಬ್ಬಂದಿಗಳು, ಸಂಘ ಸಂಸ್ಥೆಗಳು ಬೆಂಬಲ ನೀಡಬೇಕು ಎಂದರು. ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೌಸರ್ ಅಹಮದ್, ನಗರ ಪೊಲೀಸ್ ಠಾಣೆ ಪಿಎಸ್‌ಐ ಅರುಣ್, ಗ್ರಾಮಾಂತರ ಠಾಣೆ ಪಿಎಸ್‌ಐ ವಿನಯ್ ಕುಮಾರ್, ಬಿಇಒ ಸೋಮಲಿಂಗೇಗೌಡ, ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.