ಜಿಲ್ಲೆ

29ರಂದು ಹಿರಿಯ ವಿದ್ಯಾರ್ಥಿಗಳ ಸಭೆ

ಎ. ಆರ್. ರಘುರಾಮ

ಕೆ.ಆರ್. ಪೇಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ ಸ್ಥಾಪನೆಗಾಗಿ ಏ.29ರಂದು ಹಿರಿಯ ವಿದ್ಯಾರ್ಥಿಗಳ ಸಭೆ ಕರೆಯಲಾಗಿದೆ ಎಂದು ಪ್ರಾಂಶುಪಾಲ ಡಾ.ಜಗದೀಶ ತಿಳಿಸಿದ್ದಾರೆ. ಈಗಾಗಲೇ ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಬೇರು-ಚಿಗುರು ಕಾರ್ಯಕ್ರಮದ ಹೆಸರಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ರಚಿ ಸಲಾಗುತ್ತಿದೆ. ಇದರಿಂದ ಕಿರಿಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದು ಮತ್ತು ಕಾಲೇಜು ಅಭಿವೃದ್ಧಿಗೆ ಹಿರಿಯ ವಿದ್ಯಾರ್ಥಿಗಳ ಸಹಕಾರ ಪಡೆಯುವುದು ಮುಖ್ಯ ಉದ್ದೇಶವಾಗಿದೆ ಎಂದವರು ಹೇಳಿದ್ದಾರೆ.