ವಿಜಯವಾಣಿ ಸುದ್ದಿಜಾಲ ಧಾರವಾಡ
ಸರ್ಕಾರ ಅನುಷ್ಠಾನ ಮಾಡಿರುವ 5 ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಅಽಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠ್ಠಾನ ಮತ್ತು ಸಾಂಸ್ಥಿಕ ಕಾರ್ಯವಿಧಾನಗಳು ಹಾಗೂ ಪರಿಣಾಮಕಾರಿ ಜಾರಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಹಳ್ಳಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಿ ಶಾಲಾ ಮಕ್ಕಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಅಂತಾರಾಜ್ಯ ಬಸ್‌ಗಳನ್ನು ಕಡಿಮೆ ಮಾಡಿ ಸ್ಥಳೀಯ ಹಾಗೂ ಹಳ್ಳಿಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಬೇಕು. ಫಲಕ ಇಲ್ಲದ ನ್ಯಾಯ ಬೆಲೆ ಅಂಗಡಿಗಳನ್ನು ಗುರುತಿಸಿ ಬೋರ್ಡ್ಗಳನ್ನು ಹಾಕಿಸಬೇಕು. ಗೃಹ ಲಕ್ಷ್ಮೀ ಯೋಜನೆಯ 2,000 ರೂಪಾಯಿ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂಬ ದೂರುಗಳು ದಾಖಲಾಗುತ್ತಿವೆ. ಅಂಥ ಪ್ರಕರಣಗಳನ್ನು ಅಽಕಾರಿಗಳು ಪರಿಶೀಲಿಸಿ ವರದಿ ನೀಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಽಕಾರದ ಉಪಾಧ್ಯಕ್ಷರಾದ ಮುರಗಯ್ಯಾ ವಿರಕ್ತಮಠ, ಅರವಿಂದ ಏಗನಗೌಡರ, ಸುಧೀರ ಬೋಳಾರ ಹಾಗೂ ರತ್ನಾ ತೇಗೂರಮಠ ಮತ್ತು ವಿವಿಧ ಇಲಾಖೆಗಳ ಅಽಕಾರಿಗಳಿದ್ದರು.