ಜಿಲ್ಲೆ

ಪಕ್ಷ ಹೆಮ್ಮೆ ಪಡುವ ಅಭ್ಯರ್ಥಿ : ಕಾರ್ಯಕರ್ತರ ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ

ಸೌಮ್ಯ ಆರ್

ಬಂಟ್ವಾಳ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಸರ್ಕಾರ ಸುಭದ್ರವಾಗಿದೆ. ರಾಜು ಪೂಜಾರಿ ಪಕ್ಷ ಹೆಮ್ಮೆ ಪಡುವ ಅಭ್ಯರ್ಥಿ. ಜನರಿಗೆ ಹತ್ತಿರ ಇರುವ ವ್ಯಕ್ತಿಯಾಗಿದ್ದಾರೆ. ಉದಾಸೀನ ಮಾಡದೆ, ಎಲ್ಲರೂ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳದಲ್ಲಿ ಶುಕ್ರವಾರ ನಡೆದ ಚುನಾಯಿತ ಪ್ರತಿನಿಧಿಗಳ ಮತ್ತು ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, ಈ ಬಾರಿ ತನ್ನನ್ನು ಆಯ್ಕೆ ಮಾಡುವ ಮೂಲಕ ಪಕ್ಷವನ್ನು ಬಲಗೊಳಿಸಲು ವಿನಂತಿಸಿದರು.

ಮಾಜಿ ಸಚಿವ ರಮಾನಾಥ ರೈ, ವಿಧಾನಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಮಾತನಾಡಿದರು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಪಕ್ಷದ ಪ್ರಮುಖರಾದ ಅಶ್ವನಿ ಕುಮಾರ್ ರೈ, ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್ ರೋಡ್ರಿಗಸ್, ಅಬ್ಬಾಸ್ ಆಲಿ, ಪದ್ಮನಾಭ ರೈ, ಸುಭಾಶ್ಚಂದ್ರ ಶೆಟ್ಟಿ, ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಮಾಯಿಲಪ್ಪ ಸಾಲಿಯಾನ್, ಅಶ್ವನಿ ಕುಮಾರ್ ರೈ, ಪುರಸಭಾಧ್ಯಕ್ಷ ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಸ್ವಾಗತಿಸಿದರು, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.

ಚುನಾಯಿತ ಜನಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಪಕ್ಷದ ಋಣ ತೀರಿಸುವ ಕಾರ್ಯ ಮಾಡಬೇಕು. ಬಿಜೆಪಿ ಸೋಲು ಕಾಣಬೇಕಾಗಿರುವುದು ನಮ್ಮ ಟಾರ್ಗೆಟ್. ರಮಾನಾಥ ರೈ, ಮಾಜಿ ಸಚಿವ https://www.vijayavani.net/dangerous-pothole-in-kajepada https://www.vijayavani.net/accident-34