ಜಿಲ್ಲೆ

ಜಾನಪದ ಕಾರ್ಯಕ್ರಮ ನಿರಂತರವಾಗಿ ನಡೆಯಲಿ

ಎ. ಆರ್. ರಘುರಾಮ

 ಮೇಲುಕೋಟೆ : ಭಗವದ್ ರಾಮಾನುಜರ ತಪೋ ಭೂಮಿಯಲ್ಲಿ ಜಾನಪದ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಮನ್‌ಮುಲ್ ನಿರ್ದೇಶಕ ಸಿ.ಶಿವಕುಮಾರ್ ಹೇಳಿದರು. ಅವರು ಮೇಲುಕೋಟೆಯ ಚಲುವನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಜಾನಪದ ಸಂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಾನಪದ ಕಲೆಗಳು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ. ಬಾಯಿಯಿಂದ ಬಾಯಿಗೆ ಬಂದ ಜಾನಪದ ನುಡಿಗಟ್ಟು, ತಲೆಮಾರುಗಳಿಂದ ಬಂದ ಗ್ರಾಮೀಣ ಕಲೆಯನ್ನು ಉಳಿಸಿ, ಬೆಳೆಸಬೇಕು. ಈ ನಿಟ್ಟಿನಲ್ಲಿ ರಥಸಪ್ತಮಿಯಂತ ಪ್ರಮುಖ ಉತ್ಸವದ ಸಂದರ್ಭ 26 ವರ್ಷದಿಂದ ಜಾನಪದ ಕಲಾಮೇಳ ಆಯೋಜನೆ ಮಾಡುತ್ತಿರುವುದು ಶ್ಲಾಘನೀಯ ಎಂದರು. ಸ್ಥಾನಾಚಾರ್ಯ ಶ್ರೀನಿವಾಸ ನರಸಿಂಹನ್, ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್, ಗ್ರಾಪಂ ಅಧ್ಯಕ್ಷೆ ಮಣಿ ಮುರುಗನ್, ಉಪಾಧ್ಯಕ್ಷ ಜಿ.ಕೆ ಕುಮಾರ್, ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ಮುಖಂಡರಾದ ಆನಂದ್ ಇತರರು ಇದ್ದರು.