ಕಾರ್ಕಳ: ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆ ಪೂರಕ ಎಂದು ವಿದ್ಯಾವರ್ಧಕ ಸಂಘ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ ಹೇಳಿದರು.
ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಡುಪಿ ವಲಯ ಮಟ್ಟದ 2024-25ನೇ ಸಾಲಿನ ಪ್ರಾಥಮಿಕ ಶಾಲೆಗಳ ಬಾಲಕರ ಮತ್ತು ಬಾಲಕಿಯರ ಥ್ರೋಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಂಜ ಶ್ರೀಧರ ತಂತ್ರಿ ನೇತೃತ್ವ ವಹಿಸಿದ್ದರು. ಕುತ್ಯಾರು ಗ್ರಾಪಂ ಅಧ್ಯಕ್ಷ ಜನಾರ್ದನ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಸುವರ್ಣ ಉಪಸ್ಥಿತರಿದ್ದರು.
ವಿದ್ಯಾವರ್ಧಕ ಸಂಘ ಅಧ್ಯಕ್ಷ ಸುರೇಶ್ ಪಿ.ಶೆಟ್ಟಿ ಗುರ್ಮೆ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಇನ್ನಂಜೆ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಶೆಟ್ಟಿ, ಉಲ್ಲಾಯ ಫ್ರೆಂಡ್ಸ್ ಕುತ್ಯಾರು ಅಧ್ಯಕ್ಷ ಪವನ್ ಶೆಟ್ಟಿ, ಯುವಕ ಮಂಡಲ ಅಧ್ಯಕ್ಷ ಸುಶಾಂತ್ ಶೆಟ್ಟಿ, ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಪ್ರಸಾದ್ ಶೆಟ್ಟಿ, ನವೀನ್ ಶೆಟ್ಟಿ ಕುತ್ಯಾರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶರ್ಮಿಳಾ ಸ್ವಾಗತಿಸಿದರು. ಶಿಕ್ಷಕಿ ಸವಿತಾ ವಂದಿಸಿದರು. ಕುಸುಮಾ ಕಾರ್ಯಕ್ರಮ ನಿರೂಪಿಸಿದರು.
21 ತಂಡಗಳು ಭಾಗಿ
ಪಂದ್ಯಾಕೂಟದಲ್ಲಿ 12 ಬಾಲಕಿಯರ ಮತ್ತು 9 ಬಾಲಕರ ತಂಡ ಭಾಗವಹಿಸಿದ್ದವು. ಬಾಲಕರ ವಿಭಾಗದಲ್ಲಿ ವಿದ್ಯಾಪ್ರಸಾರ ವಿದ್ಯಾಮಂದಿರ ಹೆಜಮಾಡಿ ಶಾಲಾ ತಂಡ ಪ್ರಥಮ ಹಾಗೂ ಶಾಂತಿನಿಕೇತನ ಅಲೆವೂರು ಶಾಲಾ ತಂಡ ದ್ವಿತೀಯ ಸ್ಥಾನ ಗಳಿಸಿತು. ಬಾಲಕಿಯರ ವಿಭಾಗದಲ್ಲಿ ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲಾ ತಂಡ ಪ್ರಥಮ ಸ್ಥಾನಗಳಿಸಿ, ವಿದ್ಯಾಪ್ರಸಾರ ವಿದ್ಯಾಮಂದಿರ ಹೆಜಮಾಡಿ ಶಾಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.