ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ಗಿರಿಜಾ(69) ಎಂಬ ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ.
ಗಿರಿಜಾ ಮಾನಸಿಕ ಹಾಗೂ ಇತರ ಕಾಯಿಲೆಗಳಿಂದ ಬಳಲುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಭಾಗದ ಮಾವಿನ ಮರಕ್ಕೆ ಸೀರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.