ಜಿಲ್ಲೆ

19ರಂದು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ಸಹಾಯಧನ ವಿತರಣೆ

ಕುಂದಾಪುರ: ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‌ನಿಂದ ಕುಂದಾಪುರ ಹಾಗೂ ಬೈಂದೂರಿನ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜೂ.19ರಂದು ಕುಂದಾಪುರ ಸರ್ಕಾರಿ ಪ.ಪೂ. ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಬೆಂಗಳೂರಿನ ಕಾನ್ಫಿಡೆಂಟ್ ಡೆಂಟಲ್ ಇಕ್ವಿಪ್‌ಮೆಂಟ್‌ನ ಆಡಳಿತ ನಿರ್ದೇಶಕ ಡಾ.ಸುಭಾಶ್ಚಂದ್ರ ಶೆಟ್ಟಿ ಸವಾರಂಭ ಉದ್ಘಾಟಿಸಲಿದ್ದಾರೆ. ರೋಟರಿ ಜಿಲ್ಲೆ 3182ರ ಗವರ್ನರ್ ಸಿ.ಎ.ದೇವಾನಂದ್ ಅಧ್ಯಕ್ಷತೆ ವಹಿಸಲಿದ್ದಾರೆ. ಟೋಯೋಟಾ ಕಿರ್ಲೋಸ್ಕರ್ ಮೋಟಾರ್ಸ್‌ನ ಜನರಲ್ ಮ್ಯಾನೇಜರ್ ಡಾ.ದೀಪಕ್ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ.

ಸಮಾರಂಭದಲ್ಲಿ ಕುಂದಾಪುರ ರೆಡ್‌ಕ್ರಾಸ್ ಟಕ, ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ, ಕೊಮೆ, ತೆಕ್ಕಟ್ಟೆಯ ಯಶಸ್ವೀ ಕಲಾ ವೃಂದ ಸಂಟನೆಗಳ ಸಾಧನೆಗಳನ್ನು ಪರಿಗಣಿಸಿ ಗೌರವಿಸಲಾಗುತ್ತದೆ ಎಂದು ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ.