ಜಿಲ್ಲೆ

ನ.15 ರಿಂದ 17ರ ವರೆಗೆ ವಿದ್ಯುತ್​ ವ್ಯತ್ಯಯ

ಗೋಪಾಲಕೃಷ್ಣ ಪಾದೂರ್

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸದಿಂದಾಗಿ ನ. 15 ರಿಂದ 17 ರ ವರೆಗೆ ವಿವಿಧ ಸ್ಥಳಗಳಲ್ಗಿ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

15 ರಂದು ಬೆಳಗ್ಗೆ 9 ರಿಂದ ಸಾಯಂಕಾಲ 5ರ ವರೆಗೆ ಶಿವಳ್ಳಿ ಇಂಡಸ್ಟ್ರಿಯಲ್​ ಏರಿಯಾ, ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

16 ರಂದು ಬೆಳಗ್ಗೆ 9.30ರಿಂದ ಸಾಯಂಕಾಲ 5.30ರ ವರೆಗೆ ಅಜ್ಜರಕಾಡು, ಎಲ್​.ಐ.ಸಿ, ಜೋಡುಕಟ್ಟೆ, ಟಿ.ಎಂ.ಎ ಪೈ ಆಸ್ಪತ್ರೆ, ಖಜಾನೆ, ತಾಲೂಕು ಪಂಚಾಯಿತಿ, ಮಿಷನ್​ ಕಂಪೌಂಡ್​ 1ನೇ ಮುಖ್ಯ ರಸ್ತೆ, ಮಂಜುನಾಥ ಪೆಟ್ರೋಲ್​ ಪಂಪ್​ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್​ ಕಲಾಮಂದಿರ, ಕೆ.ಕೆ.ಪಾಮ್ಸ್​ರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

17ರಂದು ಬೆಳಗ್ಗೆ 9 ರಿಂದ ಸಾಯಂಕಾಲ 5ರ ವರೆಗೆ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.