Invitation to a poetry competition 
ಜಿಲ್ಲೆ

ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಹೆಚ್ಚಳ

ವಿಜಯಪುರ: ರಾಜ್ಯ ಪೌರ ನಿಗಮಗಳ ಅಧಿನಿಯಮದ ಅನ್ವಯ ಸ್ವತ್ತಿನ ಮಾರ್ಗಸೂಚಿ ಮೌಲ್ಯದ ಪರಿಷ್ಕರಣೆಯಾಗದ ವರ್ಷದಲ್ಲಿ ಪ್ರತಿ ಹಣಕಾಸು ವರ್ಷಕ್ಕೆ ಶೇ.3 ರಿಂದ 5ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಲು ಅವಕಾಶವಿದ್ದ ಹಿನ್ನೆಲೆಯಲ್ಲಿ 2025&26ನೇ ವರ್ಷಕ್ಕೆ ಅನ್ವಯವಾಗುವಂತೆ ಏ. 1 ರಿಂದ 2026 ಮಾ. 31ರ ವರೆಗೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ತಿಳಿಸಿದ್ದಾರೆ.

ವಿಜಯಪುರ ಮಹಾನಗರ ಪಾಲಿಕೆಯ ಆಸ್ತಿ ತೆರಿಗೆಯನ್ನು 2025 ಏ. 1 ರಿಂದ ಜಾರಿಗೆ ಬರುವಂತೆ ವಾಸದ ಕಟ್ಟಡ, ವಾಣಿಜ್ಯ ಕಟ್ಟಡ, ಖಾಲಿ ನಿವೇಶನ ಹಾಗೂ ಕೈಗಾರಿಕಾ ಪ್ರದೇಶಕ್ಕೆ ಶೇ.3 ರಷ್ಟು ಹೆಚ್ಚಿಸಿ ಪರಿಷ್ಕರಣೆ ಮಾಡಲಾಗಿದೆ. ಪಾಲಿಕೆಯ 2025&26ಕ್ಕೆ ಅನ್ವಯವಾಗುವಂತೆ ಮೂಲ ಆಸ್ತಿ ತೆರಿಗೆಯಲ್ಲಿ ಶೇ.3 ರಷ್ಟು ಆಸ್ತಿ ತೆರಿಗೆ ಹೆಚ್ಚಿಸಲಾಗಿದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.