ಜಿಲ್ಲೆ

ಎಫ್‌ಕೆಸಿಸಿಐ ಅಧ್ಯಕ್ಷರಾಗಿ ಎಂ.ಜಿ.ಬಾಲಕೃಷ್ಣ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್‌ಕೆಸಿಸಿಐ) 2024-25ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಎಂ.ಜಿ ಬಾಲಕೃಷ್ಣ ಅಧಿಕಾರ ವಹಿಸಿಕೊಂಡರು.

ಕಳೆದ 13 ವರ್ಷಗಳಿಂದ ಎಫ್‌ಕೆಸಿಸಿಐನ ಉಪಾಧ್ಯಕ್ಷರು, ಹಿರಿಯ ಉಪಾಧ್ಯಕ್ಷರು, ವಿವಿಧ ಹುದ್ದೆಗಳು ಹಾಗೂ ಸಮಿತಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ.

ಮಹಿಳಾ ಉದ್ಯಮಿ ಉಮಾ ರೆಡ್ಡಿ ಅವರು ಹಿರಿಯ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಇವು ಸಂಸ್ಥೆಯಲ್ಲಿ ಹಲವು ಸಮಿತಿಗಳಲ್ಲಿ ಕಾರ್ಯನಿರ್ವಹಿಸಿದ್ದು, ಮಹಿಳಾ ಉದ್ಯಮಿಗಳಿಗೆ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಯಿರಾಂ ಪ್ರಸಾದ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.