ಜಿಲ್ಲೆ

ಅಭಿವೃದ್ಧಿ ಸಹಿಸದೆ ಆರೋಪ

ಶಿವರಾಜ.ಎಂ

ಶಾಸಕ ಎನ್.ಶ್ರೀನಿವಾಸ್ ಬೇಸರ

ವಿವಿಧ ಕಾಮಗಾರಿಗೆ ಚಾಲನೆ


ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಪಕ್ಷಾತೀತವಾಗಿ, ಜಾತ್ಯತೀತವಾಗಿ ಅಭಿವೃದ್ಧಿ ಕಾರ್ಯ ಮಾಡುತ್ತಿರುವುದನ್ನು ಸಹಿಸಿಕೊಳ್ಳಲಾಗದ ಪ್ರತಿಪಕ್ಷದ ಮುಖಂಡರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.
ತಾಲೂಕಿನ ಗೊಲ್ಲಹಳ್ಳಿ ಗ್ರಾಪಂನ ಮೈಲನಹಳ್ಳಿಯಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
10 ವರ್ಷದಿಂದ ಅಧಿಕಾರದಲ್ಲಿ ಇದ್ದವರು ಮಾಡಲಾಗದ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ನಾನು ಮಾಡಿ ತೋರಿಸುತ್ತೇನೆ. ಈಗಾಗಲೇ ನಗರದ ಕೆರೆ ಅಭಿವೃದ್ಧಿ, ಕಾವೇರಿ ನೀರು ಪೂರೈಕೆಗೆ ವ್ಯವಸ್ಥೆ, ಒಳ ಚರಂಡಿ ಸೇರಿ ವಿವಿಧ ಶಾಶ್ವತ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸದನದಲ್ಲಿ ಚರ್ಚಿಸಿ, ಸಂಬಂಧಪಟ್ಟ ಸಚಿವರು, ಅಧಿಕಾರಿಗಳನ್ನು ಭೇಟಿ ಮಾಡಿದ್ದು. ಆದನ್ನು ಶೀಘ್ರ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.
ಆಪರೇಷನ್ ಹಸ್ತ: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷವನ್ನು ಮತ್ತಷ್ಟು ಬಲ ಪಡಿಸುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ತವರು ಕ್ಷೇತ್ರ ಯಶವಂತಪುರದಲ್ಲಿ ಸಾಕಷ್ಟು ಬಿಜೆಪಿ ಮುಖಂಡರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಲಾಗಿದೆ. ಜತೆಗೆ ಕ್ಷೇತ್ರದಾದ್ಯಂತ ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಪಕ್ಷ ಸೇರ್ಪಡೆಯಾಗುವ ಮುಖಂಡರಿಗೆಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕರು ತಿಳಿಸಿದರು.

ಕಾಮಗಾರಿಗೆ ಚಾಲನೆ: ಗೊಲ್ಲಹಳ್ಳಿ ಗ್ರಾಪಂನ ಮೈಲನಹಳ್ಳಿಹಳ್ಳಿಯಲ್ಲಿ ಪಿಡಬ್ಲ್ಲ್ಯುಡಿ ಇಲಾಖೆಯಿಂದ ಮೈಲನಹಳ್ಳಿ ಹಾಗೂ ಬೈರಶೆಟ್ಟಹಳ್ಳಿ ಮುಖ್ಯರಸ್ತೆಯನ್ನು 50 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಹಾಗೂ ಮೈಲನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ 9.5 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಬೈರಶೆಟ್ಟಹಳ್ಳಿಯ ಶ್ರೀ ಬೈಲಾಂಜನೇಯಸ್ವಾಮಿ ದೇವಾಲಯ ಬಳಿ 9.5 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ಘಟಕ ನಿರ್ಮಾಣಕ್ಕೆ ಎನ್.ಶ್ರೀನಿವಾಸ್ ಚಾಲನೆ ನೀಡಿದರು.ತಾಪಂ ಕಾರ್ಯನಿರ್ವಾಹಣಾಧಿಕಾರಿ ಎಲ್.ಮಧು, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ರಂಗನಾಥ್, ಬಿಎಂಟಿಸಿ ಮಾಜಿ ನಿರ್ದೇಶಕ ಮಿಲ್ಟ್ರೀಮೂರ್ತಿ, ಮುಖಂಡರಾದ ಎಂ.ಕೆ.ನಾಗರಾಜು, ಅಂಜನಮೂರ್ತಿ, ಕೃಷ್ಣಮೂರ್ತಿ, ಚಿಕ್ಕಹನುಮೇಗೌಡ, ನರಸಿಂಹಮೂರ್ತಿ, ಪುಟ್ಟಸ್ವಾಮಿ ಮತ್ತಿತರರು ಉಪಸ್ಥಿತರಿದ್ದರ