ಜಿಲ್ಲೆ

ಅ.22ರಂದು ಮಿನಿ ಉದ್ಯೋಗ ಮೇಳ: ನಾಲ್ಕು ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗೆ ನೇಮಕಾತಿ

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಇಕ್ವಿಟಾಸ್ ಸ್ಮಾಲ್ ಫೈನಾನ್ಸ್, ಬಿ.ಝಡ್ ಫೈನಾನ್ಸ್ ಲಿಮಿಟೆಡ್, ಇಂದೂಸ್ ಟಿ.ಎಂ.ಟಿ ಇಂಡಸ್ಟ್ರೀಸ್ ಹಾಗೂ ಡೆಕ್ಕನ್ ಮ್ಯಾನೇಜ್‌ಮೆಂಟ್ ಸಂಸ್ಥೆ ಸಹಯೋಗದಲ್ಲಿ ಅ.22ರಂದು ನಗರದಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಸಂಸ್ಥೆಯಲ್ಲಿ ಖಾಲಿಯಿರುವ ಹಲವಾರು ಹುದ್ದೆಗೆ ಎಸ್‌ಎಸ್‌ಎಲ್ಸಿ, ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೊಮೊ ಹಾಗೂ ಯಾವುದೇ ಪದವಿ ಉತ್ತೀರ್ಣರಾದ 18 ರಿಂದ 35 ವರ್ಷದೊಳಗಿನ ಅಂದು ಬೆಳಗ್ಗೆ 10.30ಕ್ಕೆ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಬಹುದು. ಮಾಹಿತಿಗಾಗಿ ದೂ.ಸಂ 08232-295124 ಮತ್ತು ಮೊ.ಸಂ 9164642684, 8970646629 ಹಾಗೂ 8660061488 ಯನ್ನು ಸಂಪರ್ಕಿಬಹುದು ಎಂದು ಪ್ರಕಟಣೆ ತಿಳಿಸಿದೆ.