ಕೂಡ್ಲಿಗಿಯಲ್ಲಿ ಗ್ರೇಡ್ 2 ತಹಸೀಲ್ದಾರ್ ನೇತ್ರಾವತಿಗೆ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಘಟಕ ಮನವಿ ಸಲ್ಲಿಸಿತು. ಸಂಘದ ತಾಲೂಕು ಅಧ್ಯಕ್ಷ ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಗುನ್ನಳ್ಳಿ ಶ್ರೀಧರ, ಪದಾಧಿಕಾರಿಗಳಾದ ಪ್ರದೀಪ ಕುಮಾರ, ಪರುಸಪ್ಪ, ದುರುಗೇಶ, ಸಂತೋಷ ಜಿ, ಶ್ರೀದೇವಿ, ಗೌರಮ್ಮ, ಮಹಮ್ಮದ್ ರಫಿ, ಮಹೇಶ ಇತರರಿದ್ದರು. 
ಜಿಲ್ಲೆ

ಕನಿಷ್ಠ 31 ಸಾವಿರ ರೂ. ವೇತನ ನೀಡಿ

ಕೂಡ್ಲಿಗಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಘಟಕದ ಗುರುವಾರ ಗ್ರೇಡ್ 2 ತಹಸೀಲ್ದಾರ್ ವಿ.ಕೆ.ನೇತ್ರಾವತಿಗೆ ಮನವಿ ಸಲ್ಲಿಸಿತು.

ಸರ್ಕಾರದ ವಿವಿಧ ಇಲಾಖೆಗಳ ಹಾಸ್ಟೆಲ್‌ಗಳಲ್ಲಿ ಅಡುಗೆದಾರರು, ಸ್ವಚ್ಛತಾಗಾರರು, ಕಾವಲುಗಾರರು, ಡಿ. ಗ್ರೂಪ್, ಅಟೆಂಡರ್ಸ್, ಕಂಪ್ಯೂಟರ್ ಆಪರೇಟರ್‌ಗಳಾಗಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದೇವೆ. ನಮಗೆ ನಿವೃತ್ತಿ ಆಗುವವರೆಗೆ ಸೇವಾ ಭದ್ರತೆ ಕೊಡಬೇಕು.

ಕನಿಷ್ಠ 31 ಸಾವಿರ ರೂ. ವೇತನ ನೀಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ 10 ಲಕ್ಷ ರೂ. ಪರಿಹಾರ ನೀಡಬೇಕು ಎಂಬುದು ಸೇರಿದಂತೆ 25ಕ್ಕೂ ಹೆಚ್ಚು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.